Mysore
25
overcast clouds

Social Media

ಗುರುವಾರ, 09 ಏಪ್ರಿಲ 2026
Light
Dark

ರಾಜಕೀಯಕ್ಕೂ ಸ್ವಾಮೀಜಿಗಳಿಗೂ ಯಾವುದೇ ಸಂಬಂಧವಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ದೆಹಲಿ: ಸ್ವಾಮೀಜಿಗಳು ಏನೇ ಹೇಳಲಿ, ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಡಿಕೆಶಿಯನ್ನು ಸಿಎಂ ಮಾಡಿ ಎಂಬ ಸ್ವಾಮೀಜಿಗಳ ಹೇಳಿಕೆಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಡಿಕೆಶಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಿಎಂ ಯಾರು ಎಂದು ನಿರ್ಧಾರ ಮಾಡುವವರು ಹೈಕಮಾಂಡ್‌ ಎಂದು ಅವರತ್ತ ಬೊಟ್ಟು ಮಾಡಿದ್ದಾರೆ.

ರಾಜಕೀಯಕ್ಕೂ ಸ್ವಾಮೀಜಿಗಳಿಗೂ ಯಾವುದೇ ಸಂಬಂಧವಿಲ್ಲ. ಸ್ವಾಮೀಜಿಗಳ ಹೇಳಿಕೆಗೆ ಯಾವುದೇ ಮಹತ್ವ ಕೊಡುವುದಿಲ್ಲ. ಸಿಎಂ ಸ್ಥಾನದ ಬಗ್ಗೆ ಎಲ್ಲಾ ಶಾಸಕರು ತೀರ್ಮಾನ ಮಾಡುತ್ತಾರೆ. ಕಾಂಗ್ರೆಸ್‌ ಹೈಕಮಾಂಡ್‌ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ.

ಇನ್ನೂ ಮುಂದುವರಿದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಅಡೆತಡೆಗಳಿಲ್ಲದೇ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಸಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಭಾರೀ ಅನುಕೂಲವಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ಅದು ಮುದುವರಿಯುತ್ತದೆ ಎಂದು ಸ್ಪಷ್ಟಪಡಿಸಿದರು.

 

 

 

 

 

Tags:
error: Content is protected !!