ದೆಹಲಿ: ಸ್ವಾಮೀಜಿಗಳು ಏನೇ ಹೇಳಲಿ, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಡಿಕೆಶಿಯನ್ನು ಸಿಎಂ ಮಾಡಿ ಎಂಬ ಸ್ವಾಮೀಜಿಗಳ ಹೇಳಿಕೆಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಡಿಕೆಶಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಿಎಂ ಯಾರು ಎಂದು ನಿರ್ಧಾರ ಮಾಡುವವರು ಹೈಕಮಾಂಡ್ ಎಂದು ಅವರತ್ತ ಬೊಟ್ಟು ಮಾಡಿದ್ದಾರೆ.
ರಾಜಕೀಯಕ್ಕೂ ಸ್ವಾಮೀಜಿಗಳಿಗೂ ಯಾವುದೇ ಸಂಬಂಧವಿಲ್ಲ. ಸ್ವಾಮೀಜಿಗಳ ಹೇಳಿಕೆಗೆ ಯಾವುದೇ ಮಹತ್ವ ಕೊಡುವುದಿಲ್ಲ. ಸಿಎಂ ಸ್ಥಾನದ ಬಗ್ಗೆ ಎಲ್ಲಾ ಶಾಸಕರು ತೀರ್ಮಾನ ಮಾಡುತ್ತಾರೆ. ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ.
ಇನ್ನೂ ಮುಂದುವರಿದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಅಡೆತಡೆಗಳಿಲ್ಲದೇ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಸಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಭಾರೀ ಅನುಕೂಲವಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ಅದು ಮುದುವರಿಯುತ್ತದೆ ಎಂದು ಸ್ಪಷ್ಟಪಡಿಸಿದರು.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…