ದೇಶ- ವಿದೇಶ

ಸಿ.ಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ : 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ಹೊಸದಿಲ್ಲಿ : ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ನಿಯೋಗವು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಬುಧವಾರ ಇಲ್ಲಿ ಮನವಿ ಸಲ್ಲಿಸಿದೆ.

ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ, ಇಂಧನ ಸಚಿವ ಕೆ.ಜೆ ಜಾರ್ಜ್‌, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಇದ್ದರು.

ಕೇಂದ್ರ ಸರಕಾರವು 2018ರಲ್ಲಿ ಉತ್ತರಪ್ರದೇಶ ಮತ್ತು ತಮಿಳುನಾಡಿಗೆ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಿದೆ. ಆದರೆ, ದೇಶದ ರಕ್ಷಣಾ ಮತ್ತು ವೈಮಾಂತರಿಕ್ಷ ವಲಯದಲ್ಲಿ ಕರ್ನಾಟಕವು ಶೇ.75ರಷ್ಟು ಪಾಲು ಹೊಂದಿದ್ದು, ಜಾಗತಿಕವಾಗಿ ಮೂರನೇ ಅತ್ಯುತ್ತಮ ಕಾರ್ಯಪರಿಸರ ಹೊಂದಿರುವ ಹೆಗ್ಗಳಿಕೆ ಸಂಪಾದಿಸಿದೆ. ಹೀಗಾಗಿ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಿಗೆ ಒಂದೊಂದು ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಿದರೆ, ಇದು ಮೇಕ್‌ ಇನ್‌ ಇಂಡಿಯಾ ಉಪಕ್ರಮಕ್ಕೂ ಬಲ ತುಂಬುತ್ತದೆ ಎಂದು ಸಿದ್ದರಾಮಯ್ಯ ಮನದಟ್ಟು ಮಾಡಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಪಾಟೀಲ ಅವರು ಕೂಡ ಪೂರಕ ಮಾಹಿತಿ ಒದಗಿಸಿದರು.

ಉತ್ತರ ಕರ್ನಾಟಕದ ಮೇಲ್ಕಂಡ ಮೂರು ಜಿಲ್ಲೆಗಳಲ್ಲಿ ರಕ್ಷಣಾ ವಲಯದ ಉತ್ಪಾದನಾ ಕಂಪನಿಗಳಾದ ಬಾಲೂ ಫೋರ್ಜ್‌, ಏಕಸ್‌, ಬಿಕಾರ್‌ ಏರೋಸ್ಪೇಸ್‌, ವಾಲ್‌ಚಂದ್‌ ನಗರ್‌ ಇಂಡಸ್ಟ್ರೀಸ್‌ ಮುಂತಾದವು ನೆಲೆಯೂರಿವೆ. ಜತೆಗೆ ಬೆಳಗಾವಿಯಲ್ಲಿ 250 ಎಕರೆಯಲ್ಲಿ ದೇಶದ ಪ್ರಪ್ರಥಮ ಪ್ರಿಸಿಶನ್‌ ಉತ್ಪಾದನೆಯ ವಿಶೇಷ ಆರ್ಥಿಕ ವಲಯವು ಸಕ್ರಿಯವಾಗಿದೆ. ಇಲ್ಲಿ 31 ಘಟಕಗಳಿದ್ದು, 5 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿವೆ ಎಂದು ಈ ಸಂದರ್ಭದಲ್ಲಿ ಗಮನಕ್ಕೆ ತರಲಾಗಿದೆ.

ದಕ್ಷಿಣ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ರಕ್ಷಣಾ ಸಾಮಗ್ರಿ ಮತ್ತು ವೈಮಾಂತರಿಕ್ಷ ಕಂಪನಿಗಳಾದ ಸಾರ್ವಜನಿಕ ವಲಯದ ಎಚ್‌ಎಎಲ್‌, ಕಾಲಿನ್ಸ್‌ ಏರೋಸ್ಪೇಸ್‌, ಡೈನಮ್ಯಾಟಿಕ್‌ ಟೆಕ್ನಾಲಜೀಸ್‌, ಸೆಂಟಮ್, ಸಾಸ್ಮೋಸ್‌, ಬೆಲ್ಲಾಟ್ರಿಕ್ಸ್‌ ಮುಂತಾದವು ಇವೆ. ಇವುಗಳೊಂದಿಗೆ ಟಿಎಎಸ್‌ಎಲ್‌ ತನ್ನ ಅಂತಿಮ ಜೋಡಣಾ ಘಟಕವನ್ನು ಆರಂಭಿಸುತ್ತಿದೆ. ಏರ್‌ ಇಂಡಿಯಾ ಮತ್ತು ಇಂಡಿಗೋ ಸಾವಿರಾರು ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ತಮ್ಮ ಎಂಆರ್‌ಒ ಘಟಕಗಳನ್ನು ಬೆಂಗಳೂರಿನ ಸಮೀಪದಲ್ಲಿ ಸ್ಥಾಪಿಸುತ್ತಿವೆ. ದೇವನಹಳ್ಳಿಯಲ್ಲಿ 2 ಸಾವಿರ ಎಕರೆ ವಿಸ್ತಾರದ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಇದೆ. ಈ ಭಾಗದಲ್ಲಿ ದೇಶದ ಏರ್‌ಕ್ರಾಫ್ಟ್‌ ಮತ್ತು ಸ್ಪೇಸ್‌ಕ್ರಾಫ್ಟ್‌ ವಲಯದ ಶೇಕಡ 25ರಷ್ಟು ತಯಾರಿಕೆ ನಡೆಯುತ್ತಿದೆ. ವಿಮಾನ ಮತ್ತು ಹೆಲಿಕಾಪ್ಟರ್‌ ತಯಾರಿಕೆಯಲ್ಲಿ ರಾಜ್ಯದ ಕೊಡುಗೆ ಶೇ.67ರಷ್ಟಿದೆ. ಇವೆಲ್ಲವನ್ನೂ ಪರಿಗಣಿಸಿ, ಎರಡು ಡಿಫೆನ್ಸ್‌ ಕಾರಿಡಾರ್‌ಗಳನ್ನು ಮಂಜೂರು ಮಾಡಬೇಕೆಂದು ನಿಯೋಗವು ಒತ್ತಾಯಿಸಿದೆ.

ಮನವಿ ಸ್ವೀಕರಿಸಿದ ರಾಜನಾಥ್‌ ಸಿಂಗ್‌, ಇವುಗಳನ್ನು ಸೂಕ್ತವಾಗಿ ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

13 mins ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

1 hour ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

2 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

5 hours ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

5 hours ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

5 hours ago