Mysore
23
scattered clouds

Social Media

ಶುಕ್ರವಾರ, 11 ಜುಲೈ 2025
Light
Dark

ರಾಷ್ಟ್ರಪತಿ ಭೇಟಿ ವೇಳೆ ಸಿದ್ದರಾಮಯ್ಯ ಹಾಗೂ ಅಮಿರ್‌ ಖಾನ್‌ ಮುಖಾಮುಖಿ

CM Siddaramaiah and Amir Khan face-to-face during the presidential meeting

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಗಾಗಿ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ಭವನಕ್ಕೆ ತೆರಳಿದಾಗ ಬಾಲಿವುಡ್‌ ನಟ ಹಾಗೂ ನಿರ್ದೇಶಕ ಅಮೀರ್‌ ಖಾನ್‌ ಮುಖಾಮುಖಿಯಾದರು.

ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ದೆಹಲಿಯಲ್ಲಿ ಇಂದು ರಾಷ್ಟ್ರಪತಿಗಳ ಭೇಟಿಗಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿದ ವೇಳೆ ಬಾಲಿವುಡ್‌ನ ಸಂವೇದನಾಶಿಲ ನಟ, ನಿರ್ದೇಶಕ ಅಮಿರ್‌ ಖಾನ್‌ ಅವರು ಆಕಸ್ಮಿಕವಾಗಿ ಎದುರಾದರು.

ಸಿನಿಮಾ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಧನಾತ್ಮಕ ಬದಲಾವಣೆಗೆ ತುಡಿಯುವ ಅವರೊಳಗಿನ ಸಮಾಜಮುಖಿ ವ್ಯಕ್ತಿತ್ವ ನಟನೆಯನ್ನು ಮೀರಿ ಜನರಿಗೆ ಅವರನ್ನು ಹೆಚ್ಚು ಆಪ್ತವಾಗಿಸಿದೆ.

ಅವರ ಮುಂದಿನ ಚಿತ್ರಗಳಿಗೆ ಶುಭವಾಗಲಿ ಎಂದು ಹಾರೈಸಿ ಆರೋಗ್ಯದ ಕಾಳಜಿ ವಹಿಸುವಂತೆ ಸಲಹೆ ನೀಡಿದೆ ಎಂದು ಬರೆದುಕೊಂಡಿದ್ದಾರೆ.

Tags:
error: Content is protected !!