Mysore
16
clear sky

Social Media

ಮಂಗಳವಾರ, 07 ಜನವರಿ 2025
Light
Dark

ರಾಜ್ಯದಲ್ಲಿ ಡಿನ್ನರ್‌ ಮೀಟಿಂಗ್‌ ವಿಚಾರ: ಡಿಸಿಎಂ ಡಿ.ಕೆ.ಶಿವಕುಮಾರ್‌ ರಿಯಾಕ್ಷನ್‌

ನವದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸರ್ವೇ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್‌ ಪಾರ್ಟಿ ಮೀಟಿಂಗ್‌ ನಡೆದಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ ಜೊತೆ ಎಲ್ಲಿಯೂ ಹೋಗಿರಲಿಲ್ಲ. ಆದ ಕಾರಣಕ್ಕೆ ವಿದೇಶಿ ಪ್ರವಾಸಕ್ಕೆ ತೆರಳಿದ್ದೆ ಎಂದರು.

ನಿಮ್ಮ ಅನುಪಸ್ಥಿತಿಯಲ್ಲಿ ಔತಣಕೂಟ ಸಭೆ ನಡೆದಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅನೇಕ ಮಂತ್ರಿಗಳು ಸಹ ಕುಟುಂಬದವರ ಜೊತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದರು.

ಇನ್ನು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಮಾತುಗಳು ಕೇಳಿಬರುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವ ಚರ್ಚೆಯೂ ನಡೆದಿಲ್ಲ. ಮಾಧ್ಯಮದವರಿಗೆ ಯಾರೋ ತಪ್ಪು ಮಾಹಿತಿ ನೀಡಿ, ನಿಮಗೆ ಬಿಡುವು ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಇದು ಮಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಇದರ ಬಗ್ಗೆ ಮಾತನಾಡುತ್ತಾರೆ ಎಂದರು.

 

Tags: