ದೇಶ- ವಿದೇಶ

ಸಚಿವ ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಜೂನ್‌.28) ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು.

ರಾಜ್ಯದಲ್ಲಿ ಬೆಳಗಾವಿ–ಹುನಗುಂದ-ರಾಯಚೂರು (NH748A), ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌-ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಸಿಎಂ ಕೃತಜ್ಞತೆ ಸಲ್ಲಿಸಿದರು.

ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.

ರಾಜ್ಯ ಸರ್ಕಾರದ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿರುವ ಇತರ ಪ್ರಮುಖ ವಿಷಯಗಳು:

• ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸಲು ಮನವಿ ಮಾಡಲಾಯಿತು.

• ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು.

• ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ.

• ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ

• ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ಅನುಮೋದನೆ

• ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ

• ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ.

• ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ

• NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ.

• ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ.

• ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು.

• ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ಶಾಲಿನಿ ರಜನೀಶ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ ಸೇರಿ ಮೊದಲಾದವರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಣ್ಣೂರು| ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು

ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ…

7 mins ago

ಜನವರಿ.29ರಿಂದ ಫೆಬ್ರವರಿ.06ರವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ…

29 mins ago

ಕಾಂಗ್ರೆಸ್‌ ಹೈಕಮಾಂಡ್‌ ಯಾರು ಅನ್ನೋದೆ ಗೊತ್ತಿಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕಲಬುರ್ಗಿ: ಕಾಂಗ್ರೆಸ್‌ ಹೈಕಮಾಂಡ್‌ ಯಾರು ಅನ್ನೋದೆ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ…

58 mins ago

ಚಾಮರಾಜನಗರ: ನಂಜೆದೇವಪುರ ಸುತ್ತಮುತ್ತ ಹುಲಿಗಳಿಗಾಗಿ ಶೋಧ ಕಾರ್ಯ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…

2 hours ago

ಕ್ರಿಕೆಟ್‌ ಪ್ರೇಮಿಗಳಿಗೆ ಶಾಕ್:‌ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅನುಮತಿ ನಿರಾಕರಣೆ

ಬೆಂಗಳೂರು: ಕ್ರಿಕೆಟ್‌ ಪ್ರೇಮಿಗಳಿಗೆ ಶಾಕ್‌ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…

2 hours ago

ಅಪಘಾತದಲ್ಲಿ ಗಾಯಗೊಂಡವನಿಂದ 80 ಸಾವಿರ ದೋಚಿದ್ದ ಇಬ್ಬರು ಅರೆಸ್ಟ್‌

ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್‌ ಹಾಗೂ…

2 hours ago