ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಜೂನ್.28) ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು.
ರಾಜ್ಯದಲ್ಲಿ ಬೆಳಗಾವಿ–ಹುನಗುಂದ-ರಾಯಚೂರು (NH748A), ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿ, ಸೂರತ್-ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಸಿಎಂ ಕೃತಜ್ಞತೆ ಸಲ್ಲಿಸಿದರು.
ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.
ರಾಜ್ಯ ಸರ್ಕಾರದ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿರುವ ಇತರ ಪ್ರಮುಖ ವಿಷಯಗಳು:
• ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸಲು ಮನವಿ ಮಾಡಲಾಯಿತು.
• ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು.
• ಮೈಸೂರು ನಗರದ ಮಣಿಪಾಲ್ ಆಸ್ಪತ್ರೆ ಜಂಕ್ಷನ್ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಅನುಮೋದನೆ.
• ಮೈಸೂರು ರಿಂಗ್ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ
• ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ಅನುಮೋದನೆ
• ಬೆಳಗಾವಿ ಜಿಲ್ಲೆಯ ಗೋಕಾಕ್ ಜಲಪಾತದಲ್ಲಿ ಕೇಬಲ್ ಕಾರ್ ಸೌಲಭ್ಯ ಕಲ್ಪಿಸುವ ಯೋಜನೆ
• ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ.
• ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್ ನಿರ್ಮಾಣ
• NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ.
• ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ.
• ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು.
• ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ಮುಖ್ಯಮಂತ್ರಿಗಳು ಮನವಿ ಮಾಡಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ಶಾಲಿನಿ ರಜನೀಶ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ ಸೇರಿ ಮೊದಲಾದವರು ಉಪಸ್ಥಿತರಿದ್ದರು.
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…