Mysore
22
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ರಾಹುಲ್‌ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರಿಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ ರಾಹುಲ್‌ ಗಾಂಧಿ ನಿವಾಸಕ್ಕೆ ತೆರಳಿ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ವೇಳೆ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಕೂಡ ಇದ್ದರು ಎಂದು ತಿಳಿದುಬಂದಿದೆ.

ಇದನ್ನು ಓದಿ: ಸಚಿವ ಎಚ್‌ಸಿಎಂ ಜೊತೆ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಆರ್‌ಜೆಡಿ-ಕಾಂಗ್ರೆಸ್‌ ಮೈತ್ರಿಗೆ ಮುಖಭಂಗವಾಗಿರುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್‌ ನಾಯಕರ ಸಭೆ ಕರೆದಿದ್ದಾರೆ.

ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕೆಲಸಗಳು, ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಿದರು ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!