ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರಿಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ವೇಳೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಕೂಡ ಇದ್ದರು ಎಂದು ತಿಳಿದುಬಂದಿದೆ.
ಇದನ್ನು ಓದಿ: ಸಚಿವ ಎಚ್‌ಸಿಎಂ ಜೊತೆ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ
ಬಿಹಾರ ಚುನಾವಣೆಯಲ್ಲಿ ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಗೆ ಮುಖಭಂಗವಾಗಿರುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್ ನಾಯಕರ ಸಭೆ ಕರೆದಿದ್ದಾರೆ.
ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕೆಲಸಗಳು, ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಿದರು ಎಂಬ ಮಾಹಿತಿ ಲಭ್ಯವಾಗಿದೆ.
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…
ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…
ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…
ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…
ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…