Mysore
30
few clouds

Social Media

ಶುಕ್ರವಾರ, 06 ಡಿಸೆಂಬರ್ 2024
Light
Dark

ಸಂಪುಟ ಪುನರ್‌ ರಚನೆ ಉದ್ದೇಶ ಸದ್ಯಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

ನವದೆಹಲಿ: ರಾಜ್ಯಾದ್ಯಾಂತ ಸಚಿವ ಸಂಪುಟ ಪುನರ್‌ ರಚನೆ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಪುನರ್‌ ರಚನೆ ಉದ್ದೇಶ ಸದ್ಯಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನವದೆಹಲಿಯಲ್ಲಿ ಇಂದು(ನ.29) ರಾಜ್ಯ ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರ್‌ ರಚನೆಯ ಕುರಿತು ನಾನು ಎಂದಿಗೂ ಪ್ರಸ್ತಾಪಿಸಿಲ್ಲ. ಅಲ್ಲದೇ ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌  ನಾಯಕ ರಾಹುಲ್‌ ಗಾಂಧಿಯವರೊಂದಿಗೂ ಸಹ ಚರ್ಚೆ ಮಾಡಿಲ್ಲ ಎಂದಿದ್ದಾರೆ.

ನಾಗೇಂದ್ರ ಅವರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂಬ ಹೇಳಿಕೆಯನ್ನು ಮಾತ್ರ ಹೇಳಿದ್ದೆ ಅಷ್ಟೇ. ಆದರೆ ಇದೀಗ ಸಚಿವ ಸಂಪುಟದ ಬಗ್ಗೆ ಮಾಧ್ಯಮದವರೇ ಪ್ರಕಟಿಸಿ, ಸಂಭವನೀಯವಾಗಿ ಸಚಿವರ ಪಟ್ಟಿಯನ್ನು ಕೂಡ ಬಿತ್ತರಿಸಿವೆ. ಹೀಗಾಗಿ ಈ ಎಲ್ಲಾ ಪ್ರಶ್ನೆಗಳಿಗೆ ಮಾಧ್ಯಮದವರೇ ಉತ್ತರಿಸಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ, ಹಾಸನದಲ್ಲಿ ಡಿಸೆಂಬರ್‌ 5ರಂದು ಕಾಂಗ್ರೆಸ್‌ ಪಕ್ಷ ಮತ್ತು ಹಿಂದುಳಿದ ವರ್ಗಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದೆ. ಹೀಗಾಗಿ ಸಮಾವೇಶಕ್ಕೆ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್‌  ಸಿಂಗ್‌ ಸುರ್ಜೇವಾಲ ಅವರನ್ನು ಸಂಘಟಕರು ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

 

 

Tags: