ಚೆನ್ನೈ: ಭಾರತದಲ್ಲಿ ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರ ಒಂದು ದೇಶ, ಒಂದು ಚುನಾವಣೆ ಜಾರಿಗೆ ತರಲು ಮುಂದಾಗಿರುವುದು ಪ್ರಜಾಪ್ರಭುತ್ವದ ಪಾರದರ್ಶಕತೆಯ ನಾಶದ ಉದ್ದೇಶ ಎಂದು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಜಾಪ್ರಭುತ್ವ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳ ಮೇಲಿನ ದಾಳಿಯಾಗಿದೆ. ಪ್ರಜಾಪ್ರಭುತ್ವದ ಪಾರದರ್ಶಕತರಯನ್ನು ನಾಶಪಡಿಸುವ ಉದ್ದೇಶದಿಂದ ಈ ತಿದ್ದುಪಡಿಯನ್ನು ತರಲು ಬಿಜೆಪಿ ಸರ್ಕಾರ ಮುಂದಾಗಿದೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪಂಜಾಬ್ ಹಾಗೂ ಹರಿಯಾಣದಲ್ಲಿ ಚುನಾವಣಾ ಬೂತ್‌ಗಳಲ್ಲಿ ಅಳವಡಿಸಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನಿ ಒದಗಿಸುವಂತೆ ಹೈಕೋರ್ಟ್ ಇತ್ತೀಚೆಗೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಇದರ ಪರಿಣಾವಾಗಿಯೇ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಚುನಾವಣಾ ದಾಖಲೆಗಳ ಸಾರ್ವಜನಿಕ ತಪಾಸಣೆಯನ್ನು ತಡೆಯುವ ಉದ್ದೇಶದಿಂದ ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಈ ತಿದ್ದುಪಡಿಯನ್ನು ತರಲು ಮುಂದಾಗಿದೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು: ನಟ ಯಶ್ ಹಾಗೂ ಪತ್ನಿ ರಾಧಿಕಾ ಪಂಡಿತ್ ಅವರಿಂದು ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ…
ಮುಂಬೈ: ಬಾಲಿವುಡ್‌ನ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರಿಂದು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ತಿಂಗಳುಗಳಿಂದ…
ಜೈಪುರ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರು ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದ…
ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ…
ಬೆಂಗಳೂರು: 9823 ರೂ ಕೋಟಿ ಮೌಲ್ಯದ 9 ಕೈಗಾರಿಕಾ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರಿ…