ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯ ರಾಮ ಮಂದಿರದಲ್ಲಿ ಬಾಲ ರಾಮಮೂರ್ತಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವ ಶನಿವಾರದಿಂದ ಆರಂಭವಾಗಿದೆ.
ಉತ್ತರ ಪ್ರದೇಶದ ಸಿಎಂ ಆದಿತ್ಯನಾಥ ಅವರು ಬಾಲ ರಾಮಮೂರ್ತಿಗೆ ಅಭಿಷೇಕ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಹಾ ಆರತಿ ಬೆಳಗಿ ದೇವೆರಿಗೆ 56 ತಿನಿಸುಗಳನ್ನು ಅರ್ಪಿಸಿದರು.
ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ದೇಶದ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಇಂದಿನಿಂದ ಮೂರುದಿನಗಳ ಕಾಲ ಕಾರ್ಯಕ್ರಮಗಳು ನಡೆಯಲಿದೆ ಎಂದು ರಾಮಮಂದಿರ ಟ್ರಸ್ಟ್ ಹೇಳಿದೆ.
ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಸಕಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನೀರು, ವಾಸ್ತವ್ಯ ಟೆಂಟ್‌ಗಳು, ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಭದ್ರತೆಗೆ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ.