ದೇಶ- ವಿದೇಶ

ಸಿಎಂ ನಿವಾಸ ನವೀಕರಣ: ಬಿಜೆಪಿ ಟೀಕೆ

 

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ನವೀಕರಣಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆಯಲಾಗಿದೆಯೇ ಎಂಬುದನ್ನು ಕಾಂಗ್ರೆಸ್‌ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಇಂದು ಸುದ್ದಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ವಕ್ತಾರ ಸುಧಾಂಶು ದ್ವಿವೇದಿ, ಹಣಕಾಸು ಇಲಾಖೆಯ ಅನುಮೋದನೆ ಪಡೆಯದೇ ಸಿಎಂ ನಿವಾಸ ನವೀಕರಿಸಲಾಗುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರ ಬಗ್ಗೆ ಸರ್ಕಾರ ದಾಖಲೆ ಬಹಿರಂಗಪಡಿಸಲಿ ಎಂದರು.

ದೆಹಲಿಯಲ್ಲಿ ಎಎಪಿ ಪಕ್ಷವು ನಿಯಮ ಉಲ್ಲಂಘಿಸಿ ಸಿಎಂ ನಿವಾಸ ನವೀಕರಣ ಮಾಡಿತ್ತು. ಈಗ ಕಾಂಗ್ರೆಸ್‌ ಪಕ್ಷವು ಸಹ ಇದೇ ಹಾದಿಯಲ್ಲಿದೆ ಅನಿಸುತ್ತಿದೆ ಎಂದು ಟೀಕಿಸಿದರು.

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಭ್ರಷ್ಟಚಾರ ಹೆಚ್ಚಾಗಿದೆ ಎಂದು ಗುತ್ತಿಗೆದಾರರ ಸಂಘ ಬಹಿರಂಗಪಡಿಸಿದೆ. ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ ಈಡೇರಿಸುವಲ್ಲಿ ವಿಫಲವಾಗಿದೆ. ಭ್ರಷ್ಟಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.

ಆಂದೋಲನ ಡೆಸ್ಕ್

Recent Posts

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ; ಕವಲು ದಾರಿಯಲ್ಲಿ ಕರ್ನಾಟಕದ ಮುಸ್ಲಿಂ ರಾಜಕಾರಣ

ತಮ್ಮ ಮುಂದಿನ ದಾರಿಯ ಬಗ್ಗೆ ಗಂಭೀರ ಆಲೋಚನೆಯಲ್ಲಿರುವ ಮುಸ್ಲಿಂ ಮತದಾರರು ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ…

10 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 21 ಮಂಗಳವಾರ  

1 hour ago

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

10 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

12 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

12 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

13 hours ago