ಪೋರ್ ಬಂದರ್: ಗುಜರಾತ್‌ನ ಪೋರ್ ಬಂದರ್‌ನಲ್ಲಿ ಎಎಲ್‌ಎಚ್ ಧ್ರುವ್ ಎಂಬ ಹೆಸರಿನ ಭಾರತೀಯ ಕರಾವಳಿ ಪಡೆ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ.
ಈ ದುರ್ಘಟನೆಯೂ ಪೈಲಟ್‌ಗಳಿಗೆ ತರಬೇತಿ ನೀಡುವ ಸಮಯದಲ್ಲಿ ನಡೆದಿದ್ದು, ಮೂವರು ಸಿಬ್ಬಂದಿಗಳು ಗಂಭೀರ ಗಾಯಗೊಂಡಿದ್ದರು. ಈ ಸಿಬ್ಬಂದಿಯನ್ನು ಹೆಲಿಕಾಪ್ಟರ್‌ನಿಂದ ಹೊರಕ್ಕೆ ತಂದು ಪೋರ್ ಬಂದರ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನೆಯ ಕುರಿತು ಕಮಲಾ ಬಾಗ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಜೇಶ್ ಕಾನ್ಮಿಯಾ ಮಾತನಾಡಿ, ಈ ಘಟನೆ ಸಂಭವಿಸಿದ ನಂತರ ಮೂವರು ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸಿಬ್ಬಂದಿಗಳು ಗಂಭೀರವಾಗಿ ಸುಟ್ಟ ಸ್ಥಿತಿಯಲ್ಲಿದ್ದರಿಂದ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ ಎಂದು ಹೇಳಿದ್ದಾರೆ.
ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…
ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…
ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್ ಹಾಗೂ ಸಹ ಪೈಲಟರ್ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…
ಚೆನ್ನೈ: ಇರಾನ್-ಇಸ್ರೇಲ್ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…