ದೇಶ- ವಿದೇಶ

ಗುಜರಾತ್‌| ತರಬೇತಿ ವೇಳೆ ಕರಾವಳಿ ಪಡೆ ಹೆಲಿಕಾಪ್ಟರ್‌ ಪತನ: ಮೂವರ ಸಿಬ್ಬಂದಿ ದುರ್ಮರಣ

ಪೋರ್‌ ಬಂದರ್: ಗುಜರಾತ್‌ನ ಪೋರ್‌ ಬಂದರ್‌ನಲ್ಲಿ ಎಎಲ್‌ಎಚ್‌ ಧ್ರುವ್‌ ಎಂಬ ಹೆಸರಿನ ಭಾರತೀಯ ಕರಾವಳಿ ಪಡೆ ಹೆಲಿಕಾಪ್ಟರ್‌ ಪತನಗೊಂಡಿದ್ದು, ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ.

ಈ ದುರ್ಘಟನೆಯೂ ಪೈಲಟ್‌ಗಳಿಗೆ ತರಬೇತಿ ನೀಡುವ ಸಮಯದಲ್ಲಿ ನಡೆದಿದ್ದು, ಮೂವರು ಸಿಬ್ಬಂದಿಗಳು ಗಂಭೀರ ಗಾಯಗೊಂಡಿದ್ದರು. ಈ ಸಿಬ್ಬಂದಿಯನ್ನು ಹೆಲಿಕಾಪ್ಟರ್‌ನಿಂದ ಹೊರಕ್ಕೆ ತಂದು ಪೋರ್‌ ಬಂದರ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಘಟನೆಯ ಕುರಿತು ಕಮಲಾ ಬಾಗ್‌ ಪೊಲೀಸ್‌ ಠಾಣೆಯ ಇನ್ಸ್ಪೆಕ್ಟರ್‌ ರಾಜೇಶ್‌ ಕಾನ್ಮಿಯಾ ಮಾತನಾಡಿ, ಈ ಘಟನೆ ಸಂಭವಿಸಿದ ನಂತರ ಮೂವರು ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸಿಬ್ಬಂದಿಗಳು ಗಂಭೀರವಾಗಿ ಸುಟ್ಟ ಸ್ಥಿತಿಯಲ್ಲಿದ್ದರಿಂದ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

13 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

14 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

14 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

14 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

15 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

19 hours ago