ವಿಶಾಖಪಟ್ಟಣಂ: ಕೋಬ್ರಾ-ವಿಶಾಖಪಟ್ಟಣಂ ಎಕ್ಸ್‌ಪ್ರೆಸ್ ರೈಲಿನ ಎಸಿ ಕೋಚ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿರುವ ಘಟನೆ ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿಂದು ನಡೆದಿದೆ.
ಮೊದಲಿಗೆ ಎಕ್ಸ್‌ಪ್ರೆಸ್ ರೈಲಿನ ಬಿ-7 ಎಸಿ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತೀವ್ರತೆ ಪಡೆದುಕೊಂಡ ಬೆಂಕಿ ಬಳಿಕ ಉಳಿದೆರೆಡು ಕೋಚ್‌ಗಳಿಗೂ ಹಬ್ಬಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಠಿಯಾಗಿತ್ತು. ತಕ್ಷಣ ಎಚ್ಚೆತ್ತ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಹವಾನಿಯಂತ್ರಿತ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಈವರೆಗೆ ಯಾವುದೇ ಕಾರಣ ತಿಳಿದಿಲ್ಲ. ತನಿಖೆ ಬಳಿಕ ಮಾಹಿತಿ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.