ದೇಶ- ವಿದೇಶ

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ ನಡುವೆ ಹೆಚ್ಚುತ್ತಿರುವ ಬೆಂಬಲದ ನಡುವೆ ಸಿಜೆಪಿ ಸೋಶಿಯಲ್ ಮೀಡಿಯಾ ಖಾತೆಗಳನ್ನು ನಿರ್ಬಂಧಿಸಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಎಕ್ಸ್ ಖಾತೆ ನಿರ್ಬಂಧದ ಬೆನ್ನಲ್ಲೇ ಇನ್ಸ್ಟಾಗ್ರಾಂ ಅಕೌಂಟ್ ಕೂಡಾ ಹ್ಯಾಕ್ ಆಗಿದೆ ಎಂದು ಸಿಜೆಪಿ ಸ್ಥಾಪಕ ಅಭಿಜಿತ್ ದಿಪ್ಕೆ ಆರೋಪಿಸಿದ್ದಾರೆ.

ಸಿಜೆಪಿ ಸ್ಥಾಪಕ ಅಭಿಜಿತ್​ ದೀಪ್ಕೆ ಸಿಜೆಪಿ ಇನ್‌ಸ್ಟಾ ಖಾತೆ ಹ್ಯಾಕ್‌ ಆಗಿದೆ ಎಂದು ಆರೋಪ ಮಾಡಿದ್ದಾರೆ. ಕೆಲವು ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ಅವರು, ಇನ್‌ಸ್ಟಾಗ್ರಾಮ್ ಖಾತೆಯನ್ನು ಸುರಕ್ಷತೆಗಾಗಿ ಲಾಕ್ ಮಾಡಲಾಗಿದೆ, ಗುರುತು ಪರಿಶೀಲನೆ ಮಾಡಿ, ಪಾಸ್‌ವರ್ಡ್ ಬದಲಿಸಿದರೆ ಮಾತ್ರ ಮರುಸ್ಥಾಪಿಸಲಾಗುತ್ತದೆ ಎಂಬ ಸಂದೇಶ ಕಾಣುತ್ತದೆ. ಆದರೆ ಮರುಪಡೆಯುವಿಕೆ ಪ್ರಕ್ರಿಯೆ ಪದೇ ಪದೇ ವಿಫಲವಾಗುತ್ತಿದ್ದು, ಅವರು ಸಂಪೂರ್ಣವಾಗಿ ಖಾತೆಯಿಂದ ಹೊರಗುಳಿದಿರುವುದಾಗಿ ಹೇಳಿದ್ದಾರೆ.

ಮೆಟಾ ನೀಡಿರುವ ಖಾತೆ ಮರುಪಡೆಯುವ ವ್ಯವಸ್ಥೆಯ ಮೂಲಕ ಹಲವಾರು ಬಾರಿ ಪ್ರಯತ್ನಿಸಿದರೂ, ತಮ್ಮ ಖಾತೆಯನ್ನು ಮರಳಿ ಪಡೆಯಲು ಸಾಧ್ಯವಾಗಲಿಲ್ಲ ಎಂದು ಅಬಿಜಿತ್ ದಿಪ್ಕೆ ಹೇಳಿಕೊಂಡಿದ್ದಾರೆ. ಸದ್ಯ ಇದೀಗ ಮತ್ತೆ ಸೋಷಿಯಲ್​ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಎಕ್ಸ್‌ನಲ್ಲಿ ಬ್ಯಾಕಪ್ ಖಾತೆಗೆ ನಿರ್ಬಂಧ
ಸಿಜೆಪಿ ಪಕ್ಷದ ಬ್ಯಾಕಪ್ ಇನ್‌ಸ್ಟಾಗ್ರಾಮ್ ಖಾತೆಯನ್ನೂ ಕೆಲಕಾಲ ಸಂಪೂರ್ಣವಾಗಿ ತೆಗೆದುಹಾಕಲಾಗಿತ್ತು. ನಂತರ ಗಂಟೆಗಳ ಬಳಿಕ ಅದನ್ನು ಪುನಃಸ್ಥಾಪಿಸಲಾಯಿತು ಎಂದು ದೀಪ್ಕೆ ಆರೋಪಿಸಿದ್ದಾರೆ. ಅವರು ಮಾಡಿದ ಪೋಸ್ಟ್‌ಗಳಲ್ಲಿ, ಸಾಮಾಜಿಕ ಮಾಧ್ಯಮ ಕಂಪನಿಗಳು ಈ ಚಳವಳಿಗೆ ಸಂಬಂಧಿಸಿದ ಖಾತೆಗಳನ್ನು ಗುರಿಯಾಗಿಸಿಕೊಂಡಿವೆ ಎಂದು ಕಿಡಿಕಾರಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ಮೇಲೆ ಕ್ರ್ಯಾಕ್‌ಡೌನ್ ನಡೆಯುತ್ತಿದೆ. ನಮ್ಮ ಇನ್‌ಸ್ಟಾಗ್ರಾಮ್ ಪುಟ, ನನ್ನ ವೈಯಕ್ತಿಕ ಇನ್‌ಸ್ಟಾಗ್ರಾಮ್, ಟ್ವಿಟರ್ ಖಾತೆ, ಬ್ಯಾಕಪ್ ಖಾತೆ ಎಲ್ಲವನ್ನೂ ಹ್ಯಾಕ್ ಅಥವಾ ತಡೆಹಿಡಿಯಲಾಗಿದೆ ಎಂದು ಹೇಳಿದ್ದಾರೆ.

ಅಬಿಜಿತ್ ದಿಪ್ಕೆ ಫಾರ್ಲೋವರ್ಸ್‌ಗೆ ಮನವಿ
ತಮ್ಮ ಪಕ್ಷಕ್ಕೆ ಡಿಜಿಟಲ್ ವೇದಿಕೆಗಳಲ್ಲಿ ಪ್ರವೇಶ ನಿರ್ಬಂಧಿಸಲಾಗುತ್ತಿದೆ ಎಂದು ಆರೋಪಿಸಿರುವ ಅಬಿಜಿತ್ ದಿಪ್ಕೆ ದಯವಿಟ್ಟು ಗಮನಿಸಿ, ಸದ್ಯ ನಮಗೆ ಎಲ್ಲ ವೇದಿಕೆಗಳಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ. ಹೀಗಾಗಿ, ಇನ್ಮುಂದೆ ಪ್ರಕಟವಾಗುವ ಯಾವುದೇ ಪೋಸ್ಟ್ ಕಾಕ್ರೋಚ್ ಜನತಾ ಪಕ್ಷದ ಅಧಿಕೃತ ಹೇಳಿಕೆ ಎಂದು ಪರಿಗಣಿಸಬೇಡಿ ಎಂದು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

1 hour ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

2 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

4 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

7 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

8 hours ago