ದೇಶ- ವಿದೇಶ

ಭಾರತಕ್ಕೆ ಬಂದು ಇವಿಎಂ ಹ್ಯಾಕ್‌ ಬಗ್ಗೆ ತಿಳಿಸಿಕೊಡಿ: ಎಲಾನ್‌ ಮಸ್ಕ್‌ಗೆ ಚುನಾವಣಾ ಆಯೋಗ ಸವಾಲು

ನವದೆಹಲಿ: ವಿದ್ಮುನ್ಮಾನ ಮತಯಂತ್ರಗಳ(ಇವಿಎಂ) ಪರ ವಿರೋಧ ಚರ್ಚೆಗಳು ಮತ್ತೆ ಶುರುವಾಗಿದೆ. ಇವಿಎಂ ನಿಷೇಧದ ಬಗ್ಗೆ ಅಮೆರಿಕಾದ ಎಲಾನ್‌ ಮಸ್ಕ್ ಬಿಟ್ಟ ಬಾಣ ಭಾರತಕ್ಕೆ ತಿರುಗಿದೆ. ಇವಿಎಂ ಬಗ್ಗೆ ಅಪಸ್ವರ ಎತ್ತಿರುವ ಎಲೆನ್ ಮಸ್ಕ್‌, ಇವಿಎಂ ಹ್ಯಾಕ್‌ ಆಗುವ ಸಾಧ್ಯೆತೆಯಿದ್ದು, ಇವಿಎಂ ಬಳಕೆ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ. ಸದ್ಯ ಈ ವಿಚಾರವಾಗಿ ಭಾರತ ಚುನಾವಣಾ ಆಯೋಗವು ಎಲಾನ್‌ ಮಸ್ಕ್‌ಗೆ ಸವಾಲೊಂದನ್ನು ಹಾಕಿದೆ.

ಎಲಾನ್‌ ಮಸ್ಕ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಭಾರತೀಯ ಚುನಾವಣಾ ಆಯೋಗ, ಈ ಹೇಳಿಕೆ ಅಸಂಬದ್ಧ ಊಹಾಪೋಹವಾಗಿದೆ. ಭಾರತೀಯ ಚುನಾವಣೆಗಳ ವಿಶ್ವಾಸಾರ್ಹತೆಯನ್ನು ಕೆಡಿಸುವ ಪ್ರಯತ್ನ ಇದಾಗಿದೆ ಎಂದು ಕಿಡಿಕಾರಿದ್ದು, ಎಲಾನ್‌ ಮಸ್ಕ್‌ ಅವರೇ ಭಾರತಕ್ಕೆ ಬಂದು ಇವಿಎಂಗಳ ಹ್ಯಾಕಿಂಗ್‌ ಅನ್ನು ಪ್ರದರ್ಶಿಸಲು ನಾವು ನಿಮಗೆ ಸವಾಲು ಹಾಕುತ್ತೇವೆ ಎಂದು ಹೇಳಿದೆ.

ಎಲಾನ್‌ ಮಸ್ಕ್‌ ಹೊತ್ತಿಸಿದ್ದ ಇವಿಎಂ ನಿಷೇಧದ ಕಿಚ್ಚು, ಸದ್ಯ ದೇಶಾದ್ಯಾಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮಸ್ಕ್‌ ಅವರ ಹೇಳಿಕೆಗೆ ವಿಪಕ್ಷ ನಾಯಕರು ಬೆಂಬಲ ಸೂಚಿಸುತ್ತಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೂಡ ಭಾರತದ ಇವಿಎಂಗಳು ಬ್ಲಾಕ್‌ ಬಾಕ್ಸ್‌ ಎಂದು ವ್ಯಾಖ್ಯಾನಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಲವು ತಿಂಗಳುಗಳ ಬಳಿಕ ಕನ್ನಡ ಚಿತ್ರಕ್ಕೆ ಚಿಂದಿ ರೇಟಿಂಗ್ಸ್‌

ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…

11 hours ago

ಮಂಡ್ಯ: ಸಣ್ಣ, ಅತಿಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ: ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…

11 hours ago

ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆ: ಶಾಸಕ ರವಿಕುಮಾರ್‌

ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್‌ ತಿಳಿಸಿದರು. ಮಂಡ್ಯ ತಾಲ್ಲೂಕಿನ…

12 hours ago

ನಾನು ಸಾಮಾಜಿಕ‌ ಬಹಿಷ್ಕಾರದ ಕ್ರೂರತೆ ನೋಡಿ ಬೆಳೆದವನು: ಪರಿಷತ್ ಸದಸ್ಯ ಕೆ ಶಿವಕುಮಾರ್

ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್‌ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…

12 hours ago

ಸಮಾಜದಲ್ಲಿ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ: ಸಿಎಂ ಸಿದ್ದರಾಮಯ್ಯ ಬೇಸರ

ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…

13 hours ago

2028ರವರೆಗೂ ಸಿದ್ದರಾಮಯ್ಯ ಗಟ್ಟಿಯಾಗಿರಬೇಕು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…

13 hours ago