ಅಯೋಧ್ಯೆ: ರಾಮಮಂದಿರದಲ್ಲಿ ಭದ್ರತೆಗೆಂದು ನಿಯೋಜಿಸಲಾಗಿದ್ದ ಕಮಾಂಡರ್ ಒಬ್ಬರು ಗನ್ ಅನ್ನು ಸ್ವಚ್ಛಗೊಳಿಸುವಾಗ ಗುಂಡು ಹಾರಿಸಿಕೊಂಡಿರುವ ಘಟನೆ ನಿನ್ನೆ ( ಮಾರ್ಚ್ 26 ) ಸಂಜೆ 5.45ಕ್ಕೆ ನಡೆದಿದೆ.
ಮೂಲತಃ ಅಮೇಥಿಯ ರಾಮ್‌ಪ್ರಸಾದ್ (53) ಗನ್ ಸ್ವಚ್ಛಗೊಳಿಸುತ್ತಿರಬೇಕಾದರೆ ತಿಳಿಯದೇ ತಮಗೆ ತಾವೇ ಗುಂಡು ಹಾರಿಸಿಕೊಂಡಿದ್ದಾರೆ. ಕೂಡಲೇ ಅವರನ್ನು ಶ್ರೀರಾಮ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಲಕ್ನೋದ ವೈದ್ಯಕೀಯ ಕಾಲೇಜಿಗೆ ಕಳುಹಿಸಿ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿದೆ.
ಶ್ರೀರಾಮಮಂದಿರ ಭದ್ರತೆಯಲ್ಲಿ ಪಿಎಸಿಯ 32ನೇ ಬೆಟಾಲಿಯನ್‌ನ ಪ್ಲಟೂನ್ ಕಮಾಂಡರ್ ಆಗಿ ರಾಮ್‌ಪ್ರಸಾದ್ ನಿಯೋಜಿಸಲ್ಪಟ್ಟಿದ್ದರು. ಇನ್ನು ಗನ್‌ನಿಂದ ಸಿಡಿದ ಗುಂಡು ನೇರವಾಗಿ ರಾಮ್‌ಪ್ರಸಾದ್ ಎಡ ಎದೆಗೆ ಬಡಿದು ಹಾದುಹೋಗಿದೆ. ಹೀಗೆ ಗಂಭೀರವಾಗಿ ಗಾಯಗೊಂಡ ರಾಮ್‌ಪ್ರಸಾದ್ ಸ್ಥಳದಲ್ಲೇ ಕುಸಿದುಬಿದ್ದಿದ್ದರು. ಇನ್ನು ಮಂದಿರದ ಹೈಸೆಕ್ಯೂರಿಟಿ ವಲಯದಲ್ಲಿ ಏಕಾಏಕಿ ಗುಂಡಿನ ಶಬ್ದ ಕೇಳಿಬಂದದ್ದರಿಂದ ಕೆಲಕಾಲ ಕೋಲಾಹಲ ಉಂಟಾಯಿತು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…