Mysore
24
light rain

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

commercial LPG cylinder

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ.

ಬೆಂಗಳೂರಿನಲ್ಲಿ 991 ರೂಪಾಯಿ ಏರಿಕೆಯಾಗಿದ್ದು, ಇಂದಿನಿಂದ ಒಂದು ಕಮರ್ಷಿಯಲ್‌ ಸಿಲಿಂಡರ್‌ ಬೆಲೆ ಬರೋಬ್ಬರಿ 3152 ರೂ ಆಗಿದೆ.

ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಾಗಿದ್ದರೂ ಗೃಹ ಬಳಕೆಯ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಜಾಗತಿಕ ಇಂಧನ ಬೆಲೆಗಳ ಏರಿಕೆ ಮತ್ತು ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಈ ದರ ಪರಿಷ್ಕರಣೆ ಮಾಡಲಾಗಿದೆ.

ಈ ಏರಿಕೆಯು ಹೋಟೆಲ್‌, ರೆಸ್ಟೋರೆಂಟ್‌ ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆಯನ್ನು ಉಂಟು ಮಾಡಲಿದ್ದು, ಆಹಾರ ಪದಾರ್ಥಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದೆ.

Tags:
error: Content is protected !!