ನವದೆಹಲಿ: ತೈಲ ಕಂಪನಿಗಳು ಪುನಃ ವಾಣಿಜ್ಯ ಬಳಕೆಗಾಗಿ ಬಳಸುವ ಸಿಲಿಂಡರ್‌ಗಳ ಬೆಲೆಯನ್ನು 16.5ರೂಗೆ ಏರಿಸಿದ್ದು, ಇದರಿಂದ ಸಣ್ಣ ಪುಟ್ಟ ವ್ಯಾಪಾರಿಗಳು, ಹೋಟೆಲ್ ಉದ್ಯಮಿಗಳು, ಇನ್ನಿತರರು ಆತಂಕಕ್ಕೆ ಒಳಗಾಗಿದ್ದಾರೆ. ಆದರೆ ಅಡುಗೆ ಬೆಲೆಯ ಸಿಲಿಂಡರ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ.
ದರ ಪರಿಷ್ಕರಣೆ ನಂತರ 19 ಕೆ.ಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರ 1818.50 ರೂ ಆಗಿದ್ದು, 5 ಕೆ.ಜಿಯ ಸಿಲಿಂಡರ್ ದರದಲ್ಲೂ 4 ರೂಪಾಯಿ ಹೆಚ್ಚಳ ಮಾಡಲಾಗಿದೆ. 14.2 ಕೆ.ಜಿಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಾವುದೇ ಬಾದಲಾವಣೆ ಮಾಡಿಲ್ಲ.
ಹೋದ ತಿಂಗಳು ಕೂಡ 19 ಕೆ.ಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 62 ರೂಪಾಯಿಗೆ ಹೆಚ್ಚಿಸಲಾಗಿತ್ತು. ಈ ಬೆಲೆ ಏರಿಕೆಯಿಂದ ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ ಅವಲಂಬಿತರಾಗಿರುವ ವ್ಯಾಪಾರಿಗಳು, ಉದ್ಯಮಿಗಳ ಮೇಲೆ ತೀವ್ರ ಪರಿಣಾಮ ಬೀರುವ ನಿರೀಕ್ಷೆಯಿದೆ.
ಮೈಸೂರಿನಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ
ವಿಧ ಬೆಲೆ ಬೆಲೆ ಬದಲಾವಣೆ
ಅಡುಗೆ ಅನಿಲ (14.2 kg) ರೂ. 807.50 0.00
ವಾಣಿಜ್ಯ ಅನಿಲ (19kg) ರೂ. 1856.50 +61.50
ಅಡುಗೆ ಅನಿಲ (5kg) ರೂ. 301.50 0.00
ವಾಣಿಜ್ಯ ಅನಿಲ (47.5kg) ರೂ. 4638.50 +153.50
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…