Mysore
25
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಟಿವಿಕೆ ವಿಜಯ್ ಪಕ್ಷಕ್ಕೆ ಸೀಟಿ ಗುರುತು ನೀಡಿದ ಆಯೋಗ

ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ ನಿಗದಿ ಮಾಡಿದೆ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಇದೇ ವರ್ಷ ಏಪ್ರಿಲ್-ಮೇ ಅವಧಿಯಲ್ಲಿ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ, ವಿಸಿಲ್ (ಸೀಟಿ) ಚಿಹ್ನೆಯನ್ನು ಟಿವಿಕೆಗೆ ನೀಡಲಾಗಿದೆ.

ಕಮಲ್ ಹಾಸನ್ ಅವರ ಮಕ್ಕಳ ನಿಧಿ ಮಯಂ (ಎಂಎನ್‌ಎಂ) ಪಕ್ಷಕ್ಕೆ ‘ಟಾರ್ಚ್’ ಚಿಹ್ನೆ ನೀಡಲಾಗಿದೆ. ಈ ಸಂಬಂಧ ಚುನಾವಣಾ ಆಯೋಗವು ಹೇಳಿಕೆ ಬಿಡುಗಡೆ ಮಾಡಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಎರಡು ಸುತ್ತಿನ ವಿಚಾರಣೆ
ಕರೂರು ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಟಿವಿಕೆ ಮುಖ್ಯಸ್ಥ ವಿಜಯ್ ಅವರನ್ನು ಸಿಬಿಐ ಎರಡು ಸುತ್ತಿನ ವಿಚಾರಣೆಗೆ ಒಳಪಡಿಸಿದೆ. 2025ರ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ಆಯೋಜನೆಗೊಂಡಿದ್ದ ಟಿವಿಕೆ ಸಮಾವೇಶದ ವೇಳೆ ಕಾಲ್ತುಳಿತ ಸಂಭವಿಸಿ, 41 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

 

Tags:
error: Content is protected !!