ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ ನಿಗದಿ ಮಾಡಿದೆ.
234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಇದೇ ವರ್ಷ ಏಪ್ರಿಲ್-ಮೇ ಅವಧಿಯಲ್ಲಿ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ, ವಿಸಿಲ್ (ಸೀಟಿ) ಚಿಹ್ನೆಯನ್ನು ಟಿವಿಕೆಗೆ ನೀಡಲಾಗಿದೆ.
ಕಮಲ್ ಹಾಸನ್ ಅವರ ಮಕ್ಕಳ ನಿಧಿ ಮಯಂ (ಎಂಎನ್‌ಎಂ) ಪಕ್ಷಕ್ಕೆ ‘ಟಾರ್ಚ್’ ಚಿಹ್ನೆ ನೀಡಲಾಗಿದೆ. ಈ ಸಂಬಂಧ ಚುನಾವಣಾ ಆಯೋಗವು ಹೇಳಿಕೆ ಬಿಡುಗಡೆ ಮಾಡಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಎರಡು ಸುತ್ತಿನ ವಿಚಾರಣೆ
ಕರೂರು ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಟಿವಿಕೆ ಮುಖ್ಯಸ್ಥ ವಿಜಯ್ ಅವರನ್ನು ಸಿಬಿಐ ಎರಡು ಸುತ್ತಿನ ವಿಚಾರಣೆಗೆ ಒಳಪಡಿಸಿದೆ. 2025ರ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ಆಯೋಜನೆಗೊಂಡಿದ್ದ ಟಿವಿಕೆ ಸಮಾವೇಶದ ವೇಳೆ ಕಾಲ್ತುಳಿತ ಸಂಭವಿಸಿ, 41 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…