ದೇಶ- ವಿದೇಶ

ರಾಷ್ಟ್ರಪತಿಗೆ ಅಗೌರವ ತೋರಿದ ಆರೋಪ:  ಸೋನಿಯಾ ಗಾಂಧಿ ವಿರುದ್ಧ ನ್ಯಾಯಾಲಯಕ್ಕೆ ದೂರು

ಮುಜಫರ್‌ಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅಗೌರವದ ಹೇಳಿಕೆ ನೀಡಿದ ಆರೋಪದಡಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ನ್ಯಾಯಲಯವೊಂದಕ್ಕೆ ದೂರು ನೀಡಲಾಗಿದೆ.

ಸಂಸತ್‌ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸೋನಿಯಾ ಗಾಂಧಿ ಅವರು, ಬಡಪಾಯಿ ಮಹಿಳೆ, ರಾಷ್ಟ್ರಪತಿಯವರು ಭಾಷಣ ಮುಗಿಸುವ ಹೊತ್ತಿಗೆ ಸುಸ್ತಾಗಿದ್ದರು. ಅವರಿಗೆ ಮಾತನಾಡುವುದೇ ಕಷ್ಟವಾಗಿತ್ತು. ಇದು ಕಳಪೆ ವಿಷಯ ಎಂದು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಲ್ಲಿರುವ ರಾಷ್ಟ್ರಪತಿಗೆ ಅಗೌರವ ತೋರಿದ ಆರೋಪದಡಿ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿ ಮುಜಫರ್‌ ಪುರ ಮೂಲದ ವಕೀಲ ಸುಧೀರ್‌ ಓಜಾ ಎಂಬುವವರು ನ್ಯಾಯಾಲಯವೊಂದರಲ್ಲಿ ದೂರು ದಾಖಲಿಸಿದ್ದಾರೆ.

ಇದರ ಜೊತೆಗೆ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಸಹ ಆರೋಪಿಗಳೆಂದು ಓಜಾ ಹೆಸರಿಸಿದ್ದು, ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಫೆಬ್ರವರಿ.10ರಂದು ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

6 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

7 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

7 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

8 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

8 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

12 hours ago