ಪಾಕಿಸ್ತಾನ: ಪಾಕಿಸ್ತಾನದಲ್ಲಿ ಬಸ್ವೊಂದಕ್ಕೆ ಬೆಂಕಿಹೊತ್ತಿಕೊಂಡಿದ್ದು, ಅಪಘಾತದಲ್ಲಿ 12 ಮಕ್ಕಳು ಸೇರಿದಂತೆ 21 ಮಂದಿ ಸಜೀವ ದಹನವಾಗಿರುವ ಘಟನೆ ನಿನ್ನೆ ಮಧ್ಯರಾತ್ರಿ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜಮ್ಶೋರೊ ಜಿಲ್ಲೆಯ ನೂರಿಯಾಬಾದ್ ಬಳಿಯ ಎಂ9 ಮೋಟರ್ವೇಯಲ್ಲಿ ನಡೆದಿದೆ.
ಘಟನೆಯ ದೃಶ್ಯಾವಳಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ವಿಡಿಯೋದಲ್ಲಿ, ರಸ್ತೆಯಲ್ಲಿ ನಿಂತಿರುವ ಬಸ್‌ಗೆ ಬೆಂಕಿಹೊತ್ತಿಕೊಂಡಿದ್ದು, ಧಗಧಗಿಸುತ್ತಿರುವುದನ್ನು ನೋಡಬಹುದು. ಮೃತರೆಲ್ಲರೂ ಪ್ರವಾಹ ಸಂತ್ರಸ್ತರಾಗಿದ್ದು, ಕರಾಚಿಯಿಂದ ತಮ್ಮ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಅಧಿಕಾರಿಗಳು ನೀಡಿದ ವಿವರಗಳ ಪ್ರಕಾರ, ಆಗಸ್ಟ್‌ನಲ್ಲಿ ಪಾಕಿಸ್ತಾನದಲ್ಲಿ ತೀವ್ರ ಪ್ರವಾಹ ಉಂಟಾಗಿತ್ತು. ಈ ವೇಳೆ ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ತರನ್ನು ಕರಾಚಿಯ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿತ್ತು. ಈಗ ಇಲ್ಲಿನ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ. ಹೀಗಾಗಿ, ಸಿಂಧ್ ಪ್ರಾಂತ್ಯದ 45 ಜನರು ಎಸಿ ಬಸ್‌ನಲ್ಲಿ ತಮ್ಮ ಹಳ್ಳಿಗಳಿಗೆ ಹೊರಟರು. ಬಸ್ ರಸ್ತೆಯಲ್ಲಿ ಸಾಗುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಲೇ ಬಸ್ ಸುಟ್ಟು ಬೂದಿಯಾಗಿದೆ. ನಿವಾಸಿಗಳು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರು. ಕಿಟಕಿಗಳು ಮುಚ್ಚಿದ್ದರಿಂದ ಹೊರಗೆ ಬರಲು ಸಾಧ್ಯವಾಗಲಿಲ್ಲ. ಬೆಂಕಿಯಿಂದ ಕೆಲವರು ಸುಟ್ಟು ಕರಕಲಾದರೆ, ಇನ್ನು ಕೆಲವರು ದಟ್ಟ ಹೊಗೆಯಿಂದಾಗಿ ಉಸಿರುಗಟ್ಟಿ ಪ್ರಾಣ ಕಳೆದುಕೊಂಡಿದ್ದಾರೆ.
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…
ನಾನು ಎ.ಐ. ಅಥವಾ ಕೃತಕ ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…
ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…
೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…