ದೇಶ- ವಿದೇಶ

ನರೇಗಾ ವೇತನ ಹೆಚ್ಚಿಸಬೇಕೆಂದು ಕಾಂಗ್ರೆಸ್‌ ಒತ್ತಾಯ

ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA)ಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ವೇತನವನ್ನು ಮುಂದಿನ ಕೇಂದ್ರ ಬಜೆಟ್‌ನಲ್ಲಿ ಹೆಚ್ಚಿಸಬೇಕು ಮತ್ತು ಆಧಾರ್‌ ಆಧಾರಿತ ಪಾವತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬಾರದು ಎಂದು ಕಾಂಗ್ರೆಸ್‌ ಒತ್ತಾಯಿಸಿದೆ.

ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಮಾತನಾಡಿ, ದಿನಕ್ಕೆ 400 ರೂ. ಗುರಿ ಇಟ್ಟುಕೊಂಡು ನರೇಗಾ ವೇತನವನ್ನು ಹೆಚ್ಚಿಸಬೇಕು. ವೇತನ ದರದಲ್ಲಿ ಬದಲಾವಣೆಯ ಅಗತ್ಯವನ್ನು ಮೌಲ್ಯಮಾಪನ ಮಾಡಲು ಸ್ಥಾಯಿ ಸಮಿತಿ ಸ್ಥಾಪಿಸಬೇಕು. ಅಲ್ಲದೇ, ನರೇಗಾ ಯೋಜನೆಯಡಿ ಕೆಲಸದ ದಿನಗಳನ್ನು 100 ರಿಂದ
150ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೋವಿಡ್‌ ಸಮಯದಲ್ಲಿ ನರೇಗಾ ಯೋಜನೆಯು ಜನರ ಹಣಕಾಸಿನ ವಿಷಯದಲ್ಲಿ ನಿರ್ಣಾಯಕ ಪಾತ್ರವಹಿಸಿದೆ. 2019-20ರಲ್ಲಿ 6.16 ಕೋಟಿ ಕುಟುಂಬಗಳು ಈ ಯೋಜನೆಯಡಿಯಲ್ಲಿ ಕೆಲಸ ಮಾಡಲು ವಿನಂತಿಸಿದ್ದರು. ನಂತರ 2020-21ರಲ್ಲಿ ಈ ಸಂಖ್ಯೆಯು 8.55 ಕೋಟಿಗೆ ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

6 mins ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

11 mins ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

39 mins ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

47 mins ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

5 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

5 hours ago