ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ.
ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ ಕುರಿತು ಡಿಎಂಕೆ ಮಾತುಕತೆ ಆರಂಭಿಸಿದೆ. ರಾಜ್ಯದ 234 ಸ್ಥಾನಗಳಿಗೆ ಮಾರ್ಚ್ ಅಂತ್ಯ ಅಥವಾ ಏಪ್ರಿಲ್‌ನಲ್ಲಿ ಚುನಾವಣೆ ನಡೆಯಲಿದೆ.
ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಬೇಡಿಕೆಯನ್ನು ಡಿಎಂಕೆ ಪರಿಗಣಿಸುವುದು ಕಷ್ಟವಿದೆ. ಹೆಚ್ಚಿನ ಸೀಟುಗಳಿಗೆ ಕಾಂಗ್ರೆಸ್ ಬೇಡಿಕೆ ಇಟ್ಟಿದೆ. ಆದರೆ ಮೈತ್ರಿಕೂಟದಲ್ಲಿ ಹೆಚ್ಚು ಪಕ್ಷಗಳು ಇರುವ ಕಾರಣಕ್ಕೆ ಸೀಟು ನೀಡಬಾರದು ಎಂಬುದು ಡಿಎಂಕೆ ವಾದವಾಗಿದೆ.
ತಮಿಳುನಾಡು ವಿಧಾನಸಭಾ ಚುನಾವಣೆ 2026ರಲ್ಲಿ ಕಾಂಗ್ರೆಸ್ ಬೇಡಿಕೆ ಇಟ್ಟಿರುವಷ್ಟು ಹೆಚ್ಚಿನ ಸೀಟುಗಳನ್ನು ನೀಡುವ ಒತ್ತಾಯಕ್ಕೆ ಡಿಎಂಕೆ ಮಣಿಯುವ ಸ್ಥಿತಿಯಲ್ಲಿ ಇಲ್ಲ. ಕಾಂಗ್ರೆಸ್ ಕನಿಷ್ಠ 39 ಸೀಟುಗಳು ಬೇಕು ಎಂದು ಬೇಡಿಕೆ ಇಟ್ಟಿದ್ದು, ಆಡಳಿತಾರೂಢ ಡಿಎಂಕೆ ನಾಯಕತ್ವ ಇದನ್ನು ನಿರಾಕರಿಸಿದೆ.
ನಾವು ನಮ್ಮ ಪ್ರಸ್ತಾಪವನ್ನು ಸ್ಪಷ್ಟಪಡಿಸಿದ್ದೇವೆ. ನಾವು ಅವರಿಗೆ 25 ವಿಧಾನಸಭಾ ಸ್ಥಾನಗಳು ಮತ್ತು 1 ರಾಜ್ಯಸಭಾ ಸ್ಥಾನವನ್ನು ನೀಡಲು ಸಿದ್ಧರಿದ್ದೇವೆ. ಆದರೆ ಕಾಂಗ್ರೆಸ್ 39 ವಿಧಾನಸಭಾ ಸ್ಥಾನಗಳು ಮತ್ತು ಎರಡು ರಾಜ್ಯಸಭಾ ಸ್ಥಾನಗಳನ್ನು ಕೇಳುತ್ತಿದೆ ಎಂದು ಡಿಎಂಕೆ ನಾಯಕರೊಬ್ಬರು ಹೇಳಿದ್ದಾರೆ.
ಮೈಸೂರು: ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆ ಬಯಸಿದವರು. ಅವರ ಅನುಯಾಯಿಗಳಾದ ನಾವು…
ಚಾಮರಾಜನಗರ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ…
ಮೈಸೂರು: ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದು…
ಮೈಸೂರು: ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ…
ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಒತ್ತಾಯಿಸಿದ್ದಾರೆ. ಈ ಕುರಿತು…