ದೇಶ- ವಿದೇಶ

ಟಿವಿಕೆʼಗೆ ಕಾಂಗ್ರೆಸ್‌ ಷರತ್ತುಬದ್ಧ ಬೆಂಬಲ

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂʼಗೆ (ಟಿವಿಕೆ) ಸರ್ಕಾರ ರಚಿಸಲು ಕಾಂಗ್ರೆಸ್ ಷರತ್ತುಬದ್ಧ ಬೆಂಬಲ ನೀಡಲು ಸರ್ವಾನುಮತದಿಂದ ನಿರ್ಧರಿಸಿದೆ.

108 ಸ್ಥಾನ, ಬಹುಮತಕ್ಕೆ 10 ಕಡಿಮೆ
234 ಸದಸ್ಯ ಬಲದ ವಿಧಾನಸಭೆಯಲ್ಲಿ ಟಿವಿಕೆ 108 ಸ್ಥಾನ ಗೆದ್ದು ಬಹುಮತಕ್ಕೆ 10 ಸ್ಥಾನಗಳ ಕೊರತೆ ಎದುರಿಸುತ್ತಿದೆ. ಮೇ 4ರ ಫಲಿತಾಂಶದಲ್ಲಿ ಡಿಎಂಕೆ ಎರಡನೇ ಸ್ಥಾನಕ್ಕೆ, ಎಐಎಡಿಎಂಕೆ ಮೂರನೇ ಸ್ಥಾನಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಟಿವಿಕೆ ಅಧ್ಯಕ್ಷ ವಿಜಯ್ ಕಾಂಗ್ರೆಸ್ ನಾಯಕತ್ವಕ್ಕೆ ಬೆಂಬಲ ಕೋರಿ ಮನವಿ ಮಾಡಿದ್ದರು.

ತಡರಾತ್ರಿ ಸಭೆ, ಬೆಂಬಲಕ್ಕೆ ಒಮ್ಮತ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ದೆಹಲಿಯಲ್ಲಿ ವಿಜಯ್ ಮನವಿ ಖಚಿತಪಡಿಸಿದ್ದು, ಅಂತಿಮ ತೀರ್ಮಾನವನ್ನು ಡಿಎನ್‌ಸಿಸಿ ಬಿಟ್ಟಿದ್ದರು. ಮಂಗಳವಾರ ರಾತ್ರಿ ಟಿಎನ್‌ಸಿಸಿ ಅಧ್ಯಕ್ಷ ಕೆ. ಸೆಲ್ವಪೆರುಂತಗೈ ನೇತೃತ್ವದಲ್ಲಿ ಗೂಗಲ್ ಮೀಟ್ ಮೂಲಕ ನಡೆದ ಸಭೆಯಲ್ಲಿ ಶಾಸಕರು, ಹಿರಿಯ ನಾಯಕರು ಟಿವಿಕೆಗೆ ಬೆಂಬಲ ನೀಡಲು ಒಪ್ಪಿಗೆ ಸೂಚಿಸಿದರು.

ಕಾಂಗ್ರೆಸ್‌ನ ಷರತ್ತುಗಳೇನು?
ಮೂಲಗಳ ಪ್ರಕಾರ, ಕಾಂಗ್ರೆಸ್ ಬೆಂಬಲಕ್ಕೆ ಮೂರು ಪ್ರಮುಖ ಷರತ್ತು ಹಾಕಿದೆ:
1. ಸಚಿವ ಸಂಪುಟದಲ್ಲಿ ಎರಡು ಸ್ಥಾನ.
2. ಪ್ರಮುಖ ಮಂಡಳಿ, ನಿಗಮಗಳ ಅಧ್ಯಕ್ಷ ಸ್ಥಾನ.
3. ಬಿಜೆಪಿ ಅಥವಾ ಎನ್‌ಡಿಎ ಘಟಕಗಳ ಬೆಂಬಲ ಪಡೆಯಬಾರದು.

ಐದು ಶಾಸಕರ ಬಲ ಹೊಂದಿರುವ ಕಾಂಗ್ರೆಸ್ ಬೆಂಬಲದೊಂದಿಗೆ ಟಿವಿಕೆಯ ಸಂಖ್ಯಾಬಲ 113ಕ್ಕೆ ಏರಲಿದೆ. ಜೊತೆಗೆ ಸಿಪಿಐ, ಸಿಪಿಎಂ, ವಿಸಿಕೆ, ಐಯುಎಂಎಲ್ ತಲಾ ಎರಡು ಸ್ಥಾನ ಹೊಂದಿದ್ದು, ಇವರ ಬೆಂಬಲವೂ ಸಿಕ್ಕರೆ 118ರ ಬಹುಮತದ ಗಡಿ ದಾಟಲಿದೆ.

ಇಂಡಿಯಾ ಮೈತ್ರಿಗೆ ತಿರುವು
ಕೇಂದ್ರದಲ್ಲಿ ಡಿಎಂಕೆ ಜೊತೆ ಇಂಡಿಯಾ ಮೈತ್ರಿಕೂಟದಲ್ಲಿರುವ ಕಾಂಗ್ರೆಸ್, ರಾಜ್ಯದಲ್ಲಿ ಡಿಎಂಕೆಯನ್ನು ಬಿಟ್ಟು ಟಿವಿಕೆಗೆ ಬೆಂಬಲ ನೀಡಿರುವುದು ರಾಷ್ಟ್ರ ರಾಜಕಾರಣದಲ್ಲೂ ಸಂಚಲನ ಮೂಡಿಸಿದೆ. ‘ತಮಿಳುನಾಡಿನಲ್ಲಿ ಜಾತ್ಯತೀತ ಸರ್ಕಾರ ಬೇಕು. ಸಂವಿಧಾನ ರಕ್ಷಿಸುವ ಸರ್ಕಾರಕ್ಕೆ ನಮ್ಮ ಬೆಂಬಲ. ಬಿಜೆಪಿ ಅಥವಾ ಅದರ ಪ್ರಾಕ್ಸಿ ಸರ್ಕಾರ ಬರಲು ಬಿಡುವುದಿಲ್ಲ’ ಎಂದು ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ.

ದ್ರಾವಿಡ ಯುಗಕ್ಕೆ ಅಂತ್ಯ?
2024ರ ಫೆಬ್ರವರಿಯಲ್ಲಿ ಪಕ್ಷ ಸ್ಥಾಪಿಸಿದ ವಿಜಯ್, ಮೊದಲ ಚುನಾವಣೆಯಲ್ಲೇ 108 ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಡಿಎಂಕೆ, ಎಐಎಡಿಎಂಕೆ ದ್ವಿಧ್ರುವಿ ರಾಜಕಾರಣವನ್ನು ಮುರಿದು ತಮಿಳುನಾಡಿನಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

2 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

2 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

2 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

2 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

2 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

2 hours ago