ರಾಜಸ್ತಾನ: ರೈತರಿಗಾಗಿ ಕಾಂಗ್ರೆಸ್ ಏನು ಮಾಡಿಲ್ಲದಿದ್ದರು ಅವರ ಹೆಸರಿನಲ್ಲಿ ದೊಡ್ಡದಾಗಿ ಮಾತನಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು.
ರಾಜಸ್ಥಾನದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಒಂದು ವರ್ಷ ಯಶಸ್ವಿಯಾಗಿ ಆಡಳಿತ ಪೂರೈಸಿದ ಕಾರಣ ʼಒಂದು ವರ್ಷ, ಪರಿಣಾಮ ಉತ್ಕರ್ಷʼ ಕಾರ್ಯಕ್ರಮ ಉದ್ಘಾಟಿಸಿ, ಪ್ರಧಾನಿ ಮೋದಿ ಅವರು ಮಾತನಾಡಿದರು. ಇದೇ ವೇಳೆ 46,330 ಕೋಟಿ ರೂ. ಮೌಲ್ಯದ ಇಂಧನ, ರಸ್ತೆ, ರೈಲು, ಮತ್ತು ನೀರು ಇನ್ನಿತರ ಯೋಜನೆಗಳಿಗೆ ಶಂಕು ಸ್ಥಾಪನೆ ಮಾಡಿದರು.
ರೈತರಿಗಾಗಿ ಕಾಂಗ್ರೆಸ್ ಏನು ಮಾಡುವುದಿಲ್ಲ, ಇತರರಿಗೂ ಮಾಡಲು ಬಿಡುವುದಿಲ್ಲ” ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರೈತರನ್ನು ನಿರ್ಲಕ್ಷಿಸುತ್ತದೆ. ಪೂರ್ವ ರಾಜಸ್ಥಾನ ಕಾಲುವೆ ಯೋಜನೆ ಬಹಳ ವಿಳಂಬವಾಗಲು ಕಾಂಗ್ರೆಸ್ ಕಾರಣ ಎಂದು ಕಿಡಿಕಾರಿದರು.
ನಮ್ಮ ಸರ್ಕಾರ ಸಹಕಾರದಲ್ಲಿ ನಂಬಿಕೆ ಇಟ್ಟಿದೆ ವಿನಃ ಸಂಘರ್ಷದಲ್ಲಲ್ಲ. ನಾವು ಸಮಸ್ಯೆಯನ್ನು ಸರಿಮಾಡುತ್ತೇವೆ ಹೊರತು ಹುಟ್ಟುಹಾಕುವುದಿಲ್ಲ. ಆದ್ದರಿಂದ ಪೂರ್ವ ರಾಜಸ್ಥಾನ ಕಾಲುವೆ ಯೋಜನೆಗೆ ಅನುಮೋದನೆ ನೀಡುವ ಮೂಲಕ ಯೋಜನೆಯನ್ನು ವಿಸ್ತರಿಸಿದ್ದೇವೆ ಎಂದರು.
ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ತಕ್ಷಣವೇ ಪಾರ್ವತಿ-ಕಲಿಸಿಂಧ್-ಚಂಬಲ್ ಯೋಜನೆ ಒಪ್ಪಂದಕ್ಕೆ ತರಲಾಯಿತು ಎಂದು ಹೇಳಿದರು.
ಕಾಂಗ್ರೆಸ್ ನೀರಿನ ಸಮಸ್ಯೆಗೆ ಎಂದಿಗೂ ಸ್ಪಂದಿಸುವುದಿಲ್ಲ. ನಮ್ಮ ನೀರು ಗಡಿ ದಾಟಿ ಹರಿಯುತ್ತಿದ್ದರು ಪರಿಹಾರ ಕಂಡುಕೊಳ್ಳದ ಕಾಂಗ್ರೆಸ್ ಎರಡು ರಾಜ್ಯಗಳ ನಡುವಿನ ನೀರಿನ ಸಮಸ್ಯೆಯನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ ಎಂದು ಹೇಳಿದರು.
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…