ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗಂಭೀರ ಆರೋಪ ಮಾಡಿದ್ದಾರೆ.
ಜಮ್ಮು-ಕಾಶ್ಮೀರ ವಿಧಾನಸಭೆಯ ಹಿನ್ನೆಲೆಯಲ್ಲಿ ಬಿಜೆಪಿಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಣಿವೆ ರಾಜ್ಯದಲ್ಲಿ ಐತಿಹಾಸಿಕ ಚುನಾವಣೆ ನಡೆಯಲಿದೆ.
ಮುಂಬರುವ ಚುನಾವಣೆ ಐತಿಹಾಸಿಕವಾಗಿರಲಿದೆ. ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದ ಜನರು ಒಂದೇ ತ್ರಿವರ್ಣ ಧ್ವಜದ ಅಡಿಯಲ್ಲಿ ಮತ ಚಲಾಯಿಸಲಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ಚುನಾವಣೆ ನಡೆಯಲಿದೆ. ದೇಶದಲ್ಲಿ ಇಬ್ಬರು ಪ್ರಧಾನಿಗಳು ಇರಲು ಸಾಧ್ಯವಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಜನರು ಪ್ರಧಾನಿ ಮೋದಿಯನ್ನು ಆಯ್ಕೆ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಚುನಾವಣೆಯ ನಂತರ ಸೂಕ್ತ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವುದಾಗಿ ನಾನು ವಾಗ್ದಾನ ನೀಡಿದ್ದೇನೆ. ಇದು ಯಾವುದೇ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಲ್ಲ. ಸಂಸತ್ತಿನಲ್ಲಿ ಹೇಳಿರುವುದು ಎಂದು ಇದೇ ಸಮಯದಲ್ಲಿ ಅವರು ಉಲ್ಲೇಖಿಸಿದ್ದಾರೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…