ದೇಶ- ವಿದೇಶ

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗಂಭೀರ ಆರೋಪ ಮಾಡಿದ್ದಾರೆ.

ಜಮ್ಮು-ಕಾಶ್ಮೀರ ವಿಧಾನಸಭೆಯ ಹಿನ್ನೆಲೆಯಲ್ಲಿ ಬಿಜೆಪಿಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಣಿವೆ ರಾಜ್ಯದಲ್ಲಿ ಐತಿಹಾಸಿಕ ಚುನಾವಣೆ ನಡೆಯಲಿದೆ.

ಮುಂಬರುವ ಚುನಾವಣೆ ಐತಿಹಾಸಿಕವಾಗಿರಲಿದೆ. ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದ ಜನರು ಒಂದೇ ತ್ರಿವರ್ಣ ಧ್ವಜದ ಅಡಿಯಲ್ಲಿ ಮತ ಚಲಾಯಿಸಲಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್‌ ಅವರ ಸಂವಿಧಾನದ ಅಡಿಯಲ್ಲಿ ಚುನಾವಣೆ ನಡೆಯಲಿದೆ. ದೇಶದಲ್ಲಿ ಇಬ್ಬರು ಪ್ರಧಾನಿಗಳು ಇರಲು ಸಾಧ್ಯವಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಜನರು ಪ್ರಧಾನಿ ಮೋದಿಯನ್ನು ಆಯ್ಕೆ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಚುನಾವಣೆಯ ನಂತರ ಸೂಕ್ತ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವುದಾಗಿ ನಾನು ವಾಗ್ದಾನ ನೀಡಿದ್ದೇನೆ. ಇದು ಯಾವುದೇ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಲ್ಲ. ಸಂಸತ್ತಿನಲ್ಲಿ ಹೇಳಿರುವುದು ಎಂದು ಇದೇ ಸಮಯದಲ್ಲಿ ಅವರು ಉಲ್ಲೇಖಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

9 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

21 hours ago