ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
25 ವರ್ಷ ರೈಹಾನ್ ವಾದ್ರಾ ತನ್ನ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿನ್ನೆ ಎರಡೂ ಕುಟುಂಬಗಳ ಸಮ್ಮುಖದಲ್ಲಿ ಪ್ರಪೋಸ್ ಮಾಡಿದ್ದಾರೆ. ಮದುವೆಗೆ ಎರಡೂ ಕುಟುಂಬಗಳು ಒಪ್ಪಿಗೆ ನೀಡಿದ್ದು, ರಾಜಸ್ಥಾನದ ರಣಥಂಬೋರ್‌ನಲ್ಲಿ ನಿಶ್ಚಿತಾರ್ಥ ಸಮಾರಂಭ ನಡೆದಿದೆ.
ಎರಡೂ ಕುಟುಂಬಗಳ ವರ್ಷಗಳಿಂದ ನಿಕಟ ಸಂಬಂಧ ಹೊಂದಿದ್ದು, ರೈಹಾನ್ ಹಾಗೂ ಅವಿವಾ ಒಂದೇ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.





