ದೇಶ- ವಿದೇಶ

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್‌ ವಾದ್ರಾ ನಿಶ್ಚಿತಾರ್ಥ

ನವದೆಹಲಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್‌ ವಾದ್ರಾ ಪುತ್ರ ರೈಹಾನ್‌ ವಾದ್ರಾ ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್‌ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

25 ವರ್ಷ ರೈಹಾನ್‌ ವಾದ್ರಾ ತನ್ನ ಗೆಳತಿ ಅವಿವಾ ಬೇಗ್‌ ಅವರೊಂದಿಗೆ ನಿನ್ನೆ ಎರಡೂ ಕುಟುಂಬಗಳ ಸಮ್ಮುಖದಲ್ಲಿ ಪ್ರಪೋಸ್‌ ಮಾಡಿದ್ದಾರೆ. ಮದುವೆಗೆ ಎರಡೂ ಕುಟುಂಬಗಳು ಒಪ್ಪಿಗೆ ನೀಡಿದ್ದು, ರಾಜಸ್ಥಾನದ ರಣಥಂಬೋರ್‌ನಲ್ಲಿ ನಿಶ್ಚಿತಾರ್ಥ ಸಮಾರಂಭ ನಡೆದಿದೆ.

ಎರಡೂ ಕುಟುಂಬಗಳ ವರ್ಷಗಳಿಂದ ನಿಕಟ ಸಂಬಂಧ ಹೊಂದಿದ್ದು, ರೈಹಾನ್‌ ಹಾಗೂ ಅವಿವಾ ಒಂದೇ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

3 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

3 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

3 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

4 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

4 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

4 hours ago