ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಜ್ಞ ವೈದ್ಯರಿಂದ ಚಿಕಿತ್ಸೆ ಮುಂದುವರಿದಿದೆ.
ಇನ್ನು ಸೋನಿಯಾ ಗಾಂಧಿ ಅವರು ಕಳೆದ ಕೆಲ ದಿನಗಳ ಹಿಂದೆಯಷ್ಟೇ ಹೊಟ್ಟೆಗೆ ಸಂಬಂಧಿಸಿದ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚೇತರಿಕೆ ಬಳಿಕ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದರು.
ಈಗ ಮತ್ತೆ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಸೋನಿಯಾ ಗಾಂಧಿ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಾರ್ಥಿಸಿದ್ದಾರೆ.





