ನವದೆಹಲಿ: ಅಮೆರಿಕಾ ಕೋರ್ಟ್‌ನಲ್ಲಿ ಗೌತಮ್ ಅದಾನಿ ವಿರುದ್ಧ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿರುವ ಕುರಿತು ಚರ್ಚೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಸಂಸದ ಮಾಣಿಕ್ಯಂ ಟಾಗೋರ್ ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿ ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅದಾನಿ ವಿಷಯದಲ್ಲಿ ಯಾಕೆ ಮೌನವಹಿಸುತ್ತಿದೆ? ಎಂದು ಪ್ರಶ್ನಿಸಿದ ಅವರು, ಮೋದಿ ಅವರು ಅದಾನಿ ಜೊತೆಗಿನ ಗೆಳೆತನಕ್ಕೆ ಸಂಬಂಧಿಸಿದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಬೇಕು. ಇದರಿಂದಾಗಿ ಭಾರತದ ಸಮಗ್ರತೆ ಹಾಗೂ ಜಾಗತಿಕ ಸ್ಥಾನಮಾನದ ಬಗ್ಗೆ ಚರ್ಚೆ ಮಾಡಿದಂತೆ ಆಗುತ್ತದೆ ಎಂದು ಆಗ್ರಹಿಸಿದರು.
ಇನ್ನು ಆಂಧ್ರ ಪ್ರದೇಶದ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಮುಖ್ಯಮಂತ್ರಿಯಾಗಿ ಸರ್ಕಾರದಲ್ಲಿ ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ 1,750 ಕೋಟಿ ಲಂಚ ನೀಡಿದ್ದಾರೆ ಎಂದು ಆರೋಪಿಸಿ, ಆಂಧ್ರದ ಇಂದಿನ ಸರ್ಕಾರ ಎಸ್‌ಇಸಿಐಯೊಡನೆ ಮಾಡಿಕೊಂಡಿರುವ ಸೌರ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸಲು ಚಿಂತನೆ ನಡೆಸುತ್ತಿದೆ. ಈ ಆರೋಪಗಳ ಬಗ್ಗೆ ಕೂಡಲೇ ಚರ್ಚೆ ನಡೆಸಬೇಕು ಹಾಗೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.ಹ
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…