ದೇಶ- ವಿದೇಶ

ದೇಶಾದ್ಯಂತ 15 ರಾಜ್ಯಗಳಲ್ಲಿ ಜೈ ಹಿಂದ್‌ ಸಭೆ ನಡೆಸಲು ಕಾಂಗ್ರೆಸ್‌ ಸಜ್ಜು

ಹೊಸದಿಲ್ಲಿ : ಭಾರತೀಯ ಸೈನಿಕರ ಶೌರ್ಯಪರಾಕ್ರಮವನ್ನು ಪ್ರಶಂಶಿಸಲು ಹಾಗೂ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವನ್ನು ಪ್ರಶ್ನಿಸಲು ಕಾಂಗ್ರೆಸ್ ವತಿಯಿಂದ ಬೆಂಗಳೂರು ಸೇರಿದಂತೆ ದೇಶಾದ್ಯಂತ 15 ಕಡೆಗಳಲ್ಲಿ ಜೈ ಹಿಂದ್ ಶಹಬ್ಬಾಸ್ ಸಭೆಗಳನ್ನು ಆಯೋಜಿಸಲಾಗುತ್ತಿದೆ.

ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾರತಾದ್ಯಂತ ಜೈ ಹಿಂದ್ ಶಹಬ್ಬಾಸ್ ಸಭೆಗಳ ಮೂಲಕ ನಮ್ಮ ವೀರ ಸೈನಿಕರಿಗೆ ಸೆಲ್ಯೂಟ್ ಮಾಡುತ್ತಿದೆ. ಸಶಸ್ತ್ರ ಪಡೆಗಳ ಯಶಸ್ಸನ್ನು ಸಂಭ್ರಮಿಸಲಿದೆ ಎಂದರು.

ಇದೇ ವೇಳೆ ಭದ್ರತಾ ಲೋಪಗಳ ಬಗ್ಗೆ ಪ್ರಸ್ತಾಪಿಸಲಾಗುವುದು. ಕೇಂದ್ರ ಸರ್ಕಾರ ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ವೈಫಲ್ಯ ಅನುಭವಿಸಿದೆ. ನಮ್ಮ ಆಂತರಿಕ ಭದ್ರತೆ ವಿಚಾರದಲ್ಲಿ ಅಮೆರಿಕ ತಲೆ ಹಾಕಿದ್ದು, ಇದರ ಬಗ್ಗೆ ಕೇಂದ್ರಸರ್ಕಾರದ ಮೌನದ ಕುರಿತು ಪ್ರಶ್ನೆಗಳಿವೆ ಎಂದು ಹೇಳಿದ್ದಾರೆ.

ಮೇ 20 ರಿಂದ 30ರವರೆಗೂ ದೆಹಲಿ, ಬರ್ಮಿರ್, ಶಿಮ್ಲಾ, ಪಾಟ್ನಾ, ಜಬ್ಲಾಪುರ್, ಪುಣೆ, ಗೋವಾ, ಬೆಂಗಳೂರು, ಕೊಚ್ಚಿ, ಗೊವ್ಹಾಟಿ, ಕೋಲ್ಕತ್ತ, ಹೈದ್ರಾಬಾದ್, ಭುವನೇಶ್ವರ್, ಪಟಾನ್‍ಕೋರ್ ನಗರಗಳಲ್ಲಿ ಈ ರ್ಯಾಲಿಗಳು ನಡೆಯಲಿದ್ದು, ಹಿರಿಯ ಸೈನಿಕರು, ಪಕ್ಷದ ನಾಯಕರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

6 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

12 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

13 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

13 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

14 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

20 hours ago