ಉತ್ತರ ಪ್ರದೇಶ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಕಾಂಗ್ರೆಸ್ ಅವಮಾನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.
ಈ ಬಗ್ಗೆ ವಾರಣಾಸಿಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಸಮಯದಲ್ಲಿ ನಮ್ಮ ಸ್ಥಳೀಯ ಶಸ್ತ್ರಾಸ್ತ್ರಗಳ ಸಾಮರ್ಥ್ಯಗಳನ್ನು ಜಗತ್ತು ಕಂಡಿತು. ನಮ್ಮ ವಾಯು ರಕ್ಷಣಾ ವ್ಯವಸ್ಥೆಗಳು, ಕ್ಷಿಪಣಿಗಳು ಮತ್ತು ವಿಶೇಷವಾಗಿ ಬ್ರಹ್ಮೋಸ್ ಕ್ಷಿಪಣಿಗಳು ಯಶಸ್ವಿಯಾಗಿ ಕಾರ್ಯಾಚರಣೆ ಕೈಗೊಂಡಿದ್ದವು. ಈಗ ಬ್ರಹ್ಮೋಸ್ ಕ್ಷಿಪಣಿಗಳನ್ನು ಲಕ್ನೋದಲ್ಲಿ ತಯಾರಿಸಲಾಗುವುದು ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಿಂದ ಪಾಕಿಸ್ತಾನ ಅಸಮಾಧಾನಗೊಂಡಿದೆ ಎಂದು ಎಲ್ಲರಿಗೂ ತಿಳಿದಿದೆ. ಆದರೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷವು ಪಾಕಿಸ್ತಾನ ಅನುಭವಿಸುತ್ತಿರುವ ನೋವನ್ನು ಸಹಿಸಲಾರವು. ಪಾಕಿಸ್ತಾನ ಅಳುತ್ತಿದೆ. ಇಲ್ಲಿ ಕಾಂಗ್ರೆಸ್ ಮತ್ತು ಎಸ್‌ಪಿ ಪಕ್ಷವು ಭಯೋತ್ಪಾದಕರ ಸ್ಥಿತಿಯನ್ನು ನೋಡಿ ಅಳುತ್ತಿವೆ. ಕಾಂಗ್ರೆಸ್ ನಮ್ಮ ಪಡೆಗಳ ಶೌರ್ಯವನ್ನು ನಿರಂತರವಾಗಿ ಅವಮಾನಿಸುತ್ತಿದೆ ಎಂದು ಕಿಡಿಕಾರಿದರು.





