ದೇಶ- ವಿದೇಶ

Exit polls ಕುರಿತ ಚರ್ಚೆಗಳಲ್ಲಿ ಕಾಂಗ್ರೆಸ್‌ ಭಾಗವಹಿಸುವುದಿಲ್ಲ: ಪವನ್‌ ಖೇರಾ

ನವದೆಹಲಿ: ಲೋಕಸಭಾ ಚುನಾವಣೆಯ 7ನೇ ಹಂತದ ಮತದಾನ ಇಂದು ಮುಕ್ತಾಯಗೊಳ್ಳಲಿದ್ದು, ಇದಾದ ಬಳಿಕ ಯಾವುದೇ ಸುದ್ದಿ ವಾಹಿನಿಗಳಲ್ಲಿ ನಡೆಯಲಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್‌ ಸ್ಪಷ್ಟಪಡಿಸಿದೆ.

ಟಿಆರ್‌ಪಿಗಾಗಿ ಹಾಗೂ ಕೆಸರೆರಚಾಟದ ಚರ್ಚೆಗಳಲ್ಲಿ ಪಾಲ್ಗೊಳ್ಳಲು ನಮಗೆ ಯಾವುದೇ ಕಾರಣಗಳು ಇಲ್ಲ ಎಂದು ಕಾಂಗ್ರೆಸ್‌ ಹೇಳಿದೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ, ಈಗಾಗಲೇ ಮತದಾರರು ತಮ್ಮ ಮತ ಹಕ್ಕನ್ನು ಚಲಾಯಿಸಿದ್ದು, ಅವರ ತೀರ್ಪು ಮತಪೆಟ್ಟಿಗೆಯಲ್ಲಿ ಸುರಕ್ಷಿತವಾಗಿದೆ. ಈ ಸಂಬಂಧ ಜೂನ್‌.4 ರಂದು ಫಲಿತಾಂಶ ಹೊರ ಬೀಳಲಿದ್ದು, ಅದಕ್ಕು ಮುನ್ನಾ ಟಿಆರ್‌ಪಿಗಾಗಿ ಮಾಧ್ಯಮಗಳು ನಡೆಸುವ ಚುನಾವಣೋತ್ತರ ಸಮೀಕ್ಷೆಯಲ್ಲಿ ನಾವು ಭಾಗವಹಿಸುವುದಿಲ್ಲ. ಇದಕ್ಕಾಗಿ ನಮಗೆ ಯಾವುದೇ ಕಾರಣಗಳು ಇಲ್ಲ ಎಂದು ಬರೆದುಕೊಂಡಿದ್ದಾರೆ.

ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಭಾಗವಹಿಸುವುದಿಲ್ಲ. ಯಾವುದೇ ಚರ್ಚೆಯಾದರು ಅದು ಜನರಿಗೆ ಚರ್ಚೆಯ ವಿಷಯನ್ನೇ ತಿಳಿಸುವುದು ಆಗಿರಬೇಕು. ಜೂನ್‌.4ರ ಬಳಿಕ ನಾವು ಸಂತೋಷದಿಂದ ಚರ್ಚೆಗಳಲ್ಲಿ ಭಾಹವಹಿಸಲಿದ್ದೇವೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

5 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

6 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

6 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

7 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

7 hours ago