ಕಾಂಗ್ರೆಸ್‌ ಗೆಲುವು: ಮತದಾರರಿಗೆ ಧನ್ಯವಾದ ತಿಳಿಸಿದ ರಾಹುಲ್‌ ಗಾಂಧಿ

ನವದೆಹಲಿ: ಜಾರ್ಖಂಡ್‌ ಹಾಗೂ ವಯನಾಡಿದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮತದಾರರಿಗೆ ಟ್ವೀಟ್‌ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ.

ಮಹಾರಾಷ್ಟ್ರ, ಜಾರ್ಖಂಡ್‌ ಸೇರಿದಂತೆ ಇನ್ನಿತರ ಚುನಾವಣೆಗಳ ಫಲಿತಾಂಶ ಇಂದು ಹೊರಬಿದ್ದಿದ್ದು, ಜಾರ್ಖಂಡ್‌ ಹಾಗೂ ವಯನಾಡು ಕ್ಷೇತ್ರದಲ್ಲಿ ಕಾಂಗ್ರೆಸ್‌ ವಿಜಯ ಪತಾಕೆ ಹಾರಿಸಿದೆ. ಈ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ ಧನ್ಯವಾದ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಜಾರ್ಖಂಡ್‌ನಲ್ಲಿ ಇಂಡಿಯಾ ಒಕ್ಕೂಟಕ್ಕೆ ಮತ ಚಲಾಯಿಸಿ ಗೆಲುವು ನೀಡಿದ್ದಕ್ಕೆ ಹೃತ್ಪೂರ್ವಕ ಧನ್ಯವಾದಗಳು. ಸಿಎಂ ಹೇಮಂತ್‌ ಸೊರೆನ್‌ ಅವರಿಗೆ ಹಾಗೂ ಕಾಂಗ್ರೆಸ್‌, ಜೆಎಂಎಂ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆ ತಿಳಿಸಿದರು. ಈ ಗೆಲುವು ಕೇವಲ ಸಂವಿಧಾನದ ಜಯವಲ್ಲ. ಇದು ನೆಲ, ಜಲ, ಅರಣ್ಯಕ್ಕೆ ಸಲ್ಲುವ ಜಯವಾಗಿದೆ ಎಂದು ಬರೆದುಕೊಂಡಿದ್ದಾರೆ.

ಇನ್ನು ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಗ್ಗೆಯೂ ಬರೆದುಕೊಂಡಿರುವ ರಾಹುಲ್‌ ಗಾಂಧಿ ಅವರು, ರಾಜ್ಯದ ಎಲ್ಲಾ ಮತದಾರರಿಗೆ, ಕಾರ್ಯಕರ್ತರ ಶ್ರಮಕ್ಕಾಗಿ ಧನ್ಯವಾದಗಳನ್ನು ತಿಳಿಸುತ್ತೇನೆ. ಆದರೆ ಮಹಾರಾಷ್ಟ್ರದ ಚುನಾವಣಾ ಫಲಿತಾಂಶ ಅನಿರೀಕ್ಷಿತವಾಗಿದ್ದು, ಈ ಕುರಿತು ವಿವರವಾಗಿ ವಿಶ್ಲೇಷಣೆ ನಡೆಸುತ್ತೇವೆ ಎಂದಿದ್ದಾರೆ.

ವಯನಾಡಿನಲ್ಲಿರುವ ನನ್ನ ಕುಟುಂಬದ ಜನರೆ ಪ್ರಿಯಾಂಕಾ ಅವರ ಮೇಲೆ ಇಟ್ಟಿರುವ ನಂಬಿಕೆಯ ಕುರಿತು ನನಗೆ ಹೆಮ್ಮೆಯಿದೆ. ವಯನಾಡಿನ ಪ್ರಗತಿಗಾಗಿ ಪ್ರಿಯಾಂಕಾ ಧೈರ್ಯದಿಂದ ಮುನ್ನಡೆಯುತ್ತಾಳೆ. ಈ ಬಗ್ಗೆ ನನಗೆ ನಂಬಿಕೆಯಿದೆ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago