ಚಂಡೀಘಡ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದ್ದಾರೆ.
ಹರಿಯಾಣದ ರೋಕ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಅವರ ಶವವಿದ್ದ ಸೂಟ್‌ಕೇಸ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯನ್ನು ಹಿಮಾನಿ ನರ್ವಾಲ್ (22) ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಉನ್ನತಮಟ್ಟದ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ.
ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್‌ಕೇಸ್‌ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದಾರೆ.
ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾ ಬಿಗಿಯಲಾಗಿತ್ತು. ಹೀಗಾಗಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಆಕೆಯ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ರೋಹಕ್ ಪಿಜಿಐಎಂಎಸ್‌ಗೆ ರವಾನಿಸಲಾಗಿದೆ.
ಹಿಮಾನಿ ನರ್ವಾಲ್ ಅವರು ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಪುತ್ರ ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮತ್ತು ಪಕ್ಷದ ಶಾಸಕ ಬಿಬಿ ಬಾತ್ರಾ ಅವರೊಂದಿಗೆ ಕಾಣಿಸಿಕೊಂಡಿದ್ದರು. ಅವರೊಂದಿಗಿನ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಸದ್ಯ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕರು, ಎಸ್‌ಐಟಿ ತನಿಖೆಗೆ ಆಗ್ರಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…
ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…
ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…
ಜೆರುಸೇಲಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…