ದೇಶ- ವಿದೇಶ

ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತೆ ಮೃತದೇಹ ಪತ್ತೆ

ಚಂಡೀಘಡ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದ್ದಾರೆ.

ಹರಿಯಾಣದ ರೋಕ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಅವರ ಶವವಿದ್ದ ಸೂಟ್‌ಕೇಸ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಮಹಿಳೆಯನ್ನು ಹಿಮಾನಿ ನರ್ವಾಲ್ (22) ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಉನ್ನತಮಟ್ಟದ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ.

ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್‌ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್‌ಕೇಸ್‌ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದಾರೆ.

ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾ ಬಿಗಿಯಲಾಗಿತ್ತು. ಹೀಗಾಗಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಆಕೆಯ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ರೋಹಕ್ ಪಿಜಿಐಎಂಎಸ್‌ಗೆ ರವಾನಿಸಲಾಗಿದೆ.

ಹಿಮಾನಿ ನರ್ವಾಲ್ ಅವರು ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಪುತ್ರ ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮತ್ತು ಪಕ್ಷದ ಶಾಸಕ ಬಿಬಿ ಬಾತ್ರಾ ಅವರೊಂದಿಗೆ ಕಾಣಿಸಿಕೊಂಡಿದ್ದರು. ಅವರೊಂದಿಗಿನ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಸದ್ಯ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕರು, ಎಸ್‌ಐಟಿ ತನಿಖೆಗೆ ಆಗ್ರಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

8 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago