ಶ್ರೀನಗರ: ಭಯೋತ್ಪಾದನಾ ಚಟುವಟಿಕೆಗಳ ಬಗ್ಗೆ ಯೋಜನೆ ರೂಪಿಸುತ್ತಿದ್ದ 19 ವರ್ಷದ ಯುವಕನನ್ನು ಜಮ್ಮುವಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಜಮ್ಮುವಿನ ಬಥಿಂಡಿ ಪ್ರದೇಶದಲ್ಲಿ ವಾಸಿಸುತ್ತಿದ್ದ ರಿಯಾಸಿ ಮೂಲದ ಶಂಕಿತನನ್ನು ಬಂಧಿಸಲಾಗಿದ್ದು, ಬಿಎನ್‌ಎಸ್ ಸೆಕ್ಷನ್ 113(3) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಬಂಧಿತ ಆರೋಪಿ ಆನ್‌ಲೈನ್ ಮೂಲಭೂತವಾದಿ. ಭಯೋತ್ಪಾದಕ ದಾಳಿಯನ್ನು ನಡೆಸಲು ಯೋಜನೆ ರೂಪಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಯುವಕ ಪಾಕಿಸ್ತಾನ ಹಾಗೂ ಇತರೆ ವಿದೇಶಗಳಲ್ಲಿ ನೆಲೆಸಿರುವವರಿಗೆ ಕರೆ ಮಾಡುತ್ತಿದ್ದ. ನಿರಂತರ ಸಂಪರ್ಕದಲ್ಲಿ ಇರುತ್ತಿದ್ದ. ಆತನ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.





