Mysore
30
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

ನ.26ಕ್ಕೆ ಮೈಸೂರಿನಲ್ಲಿ ಸಂವಿಧಾನ ದಿನಾಚರಣೆ: ಕಾಂಗ್ರೆಸ್‌ ಹೈಕಮಾಂಡ್‌ ನಾಯಕರಿಗೆ ಆಹ್ವಾನ!

ನವದೆಹಲಿ: ನವೆಂಬರ್‌ 26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರನ್ನು ಆಹ್ವಾನಿಸಲಾಗಿದೆ ಎಂದು ಸಚಿವ ನರೇಂದ್ರಸ್ವಾಮಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿದ ಎಲ್ಲ ನಾಯಕರನ್ನೂ ಆಹ್ವಾನಿಸಲಾಗುವುದು. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದಿದ್ದಾರೆ.

ಸಂವಿಧಾನ ಎಲ್ಲರೂ ಒಗ್ಗಟ್ಟಿನಿಂದ ಬದುಕಲು ಮಾರ್ಗದರ್ಶನ ನೀಡುವ ಅಮೂಲ್ಯ ಗ್ರಂಥ ಎಂದು ಹೇಳಿದ್ದಾರೆ. ಪ್ರತ್ಯೇಕ ಕಾರ್ಯಕ್ರಮಗಳ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರದ ಅಧಿಕೃತ ಕಾರ್ಯಕ್ರಮದ ಮೇಲಷ್ಟೇ ಗಮನ ಹರಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

Tags:
error: Content is protected !!