ದೇಶ- ವಿದೇಶ

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ ರೂ.2.61 ಹಾಗೂ ಡೀಸೆಲ್ ದರವನ್ನು ರೂ.2.71 ಹೆಚ್ಚಿಸಲಾಗಿದ್ದು, ಕಳೆದ ಎರಡು ವಾರಗಳಲ್ಲಿ ಇದು ನಾಲ್ಕನೇ ಬಾರಿ ನಡೆದ ದರ ಏರಿಕೆಯಾಗಿದೆ.

ಪೆಟ್ರೋಲ್‍ಗೆ 2.83 ರೂ, ಹಾಗೂ ಡೀಸೆಲ್ ಗೆ 2.81 ರೂ ಹೆಚ್ಚಳ ಆಗಿದೆ. ಹೀಗಾಗಿ ಪೆಟ್ರೋಲ್ ಬೆಲೆ 110.89 ರೂ,ಡೀಸೆಲ್‍ಗೆ 98.80 ರೂ ತಲುಪಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಪೆಟ್ರೋಲ್ ಬೆಲೆ 111.19 ರೂ ಹಾಗೂ ಡೀಸೆಲ್ ಬೆಲೆ 99.08 ರೂ ದಾಖಲಾಗಿದೆ.
ಈ ವರೆಗೆ ಒಟ್ಟು ಪೆಟ್ರೋಲ್ ಡೀಸೆಲ್ ಲೀಟರ್ ಬೆಲೆಯಲ್ಲಿ 7 ರೂಪಾಯಿಗೂ ಹೆಚ್ಚು ಬೆಲೆ ಏರಕೆ ಕಂಡಿದೆ. ದೆಹಲಿಯಲ್ಲೀಗ ಪೆಟ್ರೋಲ್ ದರ 102.12 ರೂ, ಡೀಸೆಲ್ ಗೆ 95.20 ರೂ ಹೆಚ್ಚಳ ಆಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹಾಗೂ ಸ್ಥಳೀಯ ಮೌಲ್ಯವರ್ಧಿತ ತೆರಿಗೆ ರಾಜ್ಯದಿಂದ ರಾಜ್ಯಕ್ಕೆ ಬದಲಾಗುವುದರಿಂದ ವಿವಿಧ ನಗರಗಳಲ್ಲಿ ಇಂಧನ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ದೈನಂದಿನ ಬೆಲೆ ಪರಿಷ್ಕರಣೆ ನೀತಿಯ ಅಡಿಯಲ್ಲಿ, ತೈಲ ಕಂಪನಿಗಳು ಪ್ರತಿದಿನ ಬೆಳಿಗ್ಗೆ ಇಂಧನ ದರಗಳನ್ನು ನವೀಕರಿಸುತ್ತವೆ.

ಸತತ ನಾಲ್ಕನೇ ಬಾರಿಗೆ ಬೆಲೆ ಏರಿಕೆಯಾಗಿರುವುದು ಸಾರಿಗೆ ವಲಯದ ಮೇಲೂ ನೇರ ಪರಿಣಾಮ ಬೀರಲಿದ್ದು, ಸರಕು ಸಾಗಣೆ ವೆಚ್ಚ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ತರಕಾರಿ ಹಾಗೂ ದಿನಸಿ ವಸ್ತುಗಳ ಬೆಲೆಯೂ ದುಬಾರಿಯಾಗುವ ಭೀತಿ ಜನಸಾಮಾನ್ಯರನ್ನು ಕಾಡುತ್ತಿದೆ. ತೈಲ ಬೆಲೆ ಇಳಿಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಕೂಗು ಸಾರ್ವಜನಿಕ ವಲಯದಲ್ಲಿ ಜೋರಾಗಿದೆ.

ಅಮೆರಿಕ- ಇರಾನ್ ಸಂಗರ್ಷದಿಂದಾಗಿ, ಹರ್ಮುಜ್ ಬಿಕ್ಕಟ್ಟಿನಿಂದ ಕಚ್ಚಾತೈಲ ದರ ಏರಿಕೆ, ಹಣದುಬ್ಬರದ ಸ್ಥಿತಿ ಹಾಗೂ ರೂಪಾಯಿ ಮೌಲ್ಯ ಕುಸಿತದಿಂದ ಆಮದು ವೆಚ್ಚ ಹೆಚ್ಚಳ ಆಗಿರುವ ಕಾರಣಕ್ಕೆ, ದೇಶದಲ್ಲಿ ಪೆಟ್ರೋಲ್ ಡೀಶೆಲ್ ಬೆಲೆ ಸತತವಾಗಿ ಏರಿಕೆ ಕಂಡಿದೆ. ಈ ವರೆಗೂ 7 ರೂಪಾಯಿಗೂ ಹೆಚ್ಚು ಏರಿಕೆಯಾಗಿದೆ. ಈ ನಿರಂತರ ಬೆಲೆ ಏರಿಕೆಯು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದ್ದು, ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗುವ ಆತಂಕವನ್ನು ಸೃಷ್ಟಿಸಿದೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‍ಗೆ 102.12 ರೂ. ತಲುಪಿದ್ದರೆ, ಡೀಸೆಲ್ ದರ ಲೀಟರ್‍ಗೆ 95.20 ರೂ.ಗೆ ಮಾರಾಟವಾಗುತ್ತಿದೆ. ರಾಜ್ಯದ ವಿವಿಧೆಡೆ ಇರುವ ಪೆಟ್ರೋಲ್ ಬಂಕ್ ಹೊಸ ದರಗಳು ಈಗಾಗಲೇ ಜಾರಿಗೆ ಬಂದಿದ್ದು, ಬೆಲೆ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿನ ಏರಿಳಿತಗಳೇ ಈ ಸತತ ದರ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದು ತೈಲ ಮಾರುಕಟ್ಟೆ ಕಂಪನಿಗಳು ತಿಳಿಸಿವೆ.

ಮೇ 15ರಂದು ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ತಲಾ ರೂ.3ರಷ್ಟು ಹೆಚ್ಚಿಸಲಾಗಿತ್ತು. ಬಳಿಕ ಮೇ 19ರಂದು ಸುಮಾರು 90 ಪೈಸೆ ಏರಿಕೆ ಮಾಡಲಾಗಿತ್ತು. ಮೇ 23ರಂದು ಮತ್ತೆ ಪೆಟ್ರೋಲ್‍ಗೆ 87 ಪೈಸೆ ಮತ್ತು ಡೀಸೆಲ್‍ಗೆ 91 ಪೈಸೆ ಹೆಚ್ಚಳವಾಗಿತ್ತು.

ಇಂಧನ ದರ ಏರಿಕೆಯಿಂದ ಸರಕು ಸಾಗಣೆ, ಕ್ಯಾಬ್, ಬಸ್, ಕೃಷಿ ಹಾಗೂ ದಿನನಿತ್ಯದ ವಸ್ತುಗಳ ಬೆಲೆಯ ಮೇಲೂ ನೇರ ಪರಿಣಾಮ ಬೀರುತ್ತಿದೆ.ಈಗಿನ ಹೊಸ ಏರಿಕೆಯಿಂದ ಎರಡು ವಾರಗಳ ಅವಧಿಯಲ್ಲಿ ಜನರ ಮೇಲೆ ಭಾರೀ ಹೊರೆ ಬಿದ್ದಂತಾಗಿದೆ. ಹಲವು ತಿಂಗಳುಗಳ ಕಾಲ ಸ್ಥಿರವಾಗಿದ್ದ ಇಂಧನ ದರಗಳು ಏಕಾಏಕಿ ನಿರಂತರವಾಗಿ ಏರಿಕೆಯಾಗುತ್ತಿರುವುದು ವಾಹನ ಸವಾರರು ಮತ್ತು ಮಧ್ಯಮ ವರ್ಗದ ಜನರಿಗೆ ಸಂಕಷ್ಟ ತಂದೊಡ್ಡಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯೇ ಇದಕ್ಕೆ ಪ್ರಮುಖ ಕಾರಣವೆಂದು ತೈಲ ಕಂಪನಿಗಳು ಹೇಳುತ್ತಿವೆ. ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ, ಅಮೆರಿಕಾ ಮತ್ತು ಇಸ್ರೇಲ್ ದಾಳಿಗಳ ನಂತರ ಇರಾನ್ ಸುತ್ತಲಿನ ರಾಜಕೀಯ ಮತ್ತು ಯುದ್ಧ ಭೀತಿ, ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಣೆಗೆ ಉಂಟಾದ ಅಡಚಣೆ ಇವೆಲ್ಲವೂ ಕಚ್ಚಾ ತೈಲದ ಬೆಲೆಯನ್ನು ಹೆಚ್ಚಿಸಿವೆ.

ಫೆಬ್ರವರಿ ಅಂತ್ಯದಿಂದ ಜಾಗತಿಕ ಕಚ್ಚಾ ತೈಲದ ದರವು 50 ಶೇಕಡಕ್ಕಿಂತ ಹೆಚ್ಚು ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. ಇದರ ಜೊತೆಗೆ ರೂಪಾಯಿ ಮೌಲ್ಯ ಕುಸಿತ ಭಾರತಕ್ಕೆ ತೈಲ ಆಮದು ವೆಚ್ಚವನ್ನು ಹೆಚ್ಚಿಸಿದೆ.

ಪಶ್ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳ ಚುನಾವಣಾ ಫಲಿತಾಂಶಗಳ ನಂತರವೇ ದರ ಪರಿಷ್ಕರಣೆ ಆರಂಭವಾದ ಕಾರಣ ರಾಜಕೀಯ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗಿವೆ.

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಮುಂದಿನ ದಿನಗಳಲ್ಲಿ ಬಸ್, ಆಟೋ, ಟ್ಯಾಕ್ಸಿ ದರಗಳೂ ಏರಬಹುದಾದ ಸಾಧ್ಯತೆ ಇದೆ. ಸರಕು ಸಾಗಣೆ ವೆಚ್ಚ ಹೆಚ್ಚಾದರೆ ತರಕಾರಿ, ಹಣ್ಣು, ದಿನಸಿ ಸೇರಿದಂತೆ ಸಾಮಾನ್ಯ ಬಳಕೆಯ ವಸ್ತುಗಳ ಬೆಲೆಯೂ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ದುಬಾರಿ ಜೀವನದಿಂದ ಬಳಲುತ್ತಿರುವ ಜನರಿಗೆ ಈ ಇಂಧನ ದರ ಏರಿಕೆ ಮತ್ತೊಂದು ದೊಡ್ಡ ಹೊರೆ ಆಗಿದೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

5 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

6 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

7 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

10 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

11 hours ago