Mysore
28
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ದೆಹಲಿಯಲ್ಲಿ ಸತತ ದಟ್ಟ ಮಂಜು: ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

ನವದೆಹಲಿ: ದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ದಟ್ಟ ಮಂಜು ಆವರಿಸಿಕೊಂಡಿದ್ದು, ವಿಮಾನ ಮತ್ತು ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸತತ ಮೂರು ದಿನಗಳಿಂದ ಮಂಜು ಕವಿದ ವಾತಾವರಣವಿದ್ದ ಹಿನ್ನೆಲೆಯಲ್ಲಿ ಇಂದು(ಜನವರಿ.5) ಸುಮಾರು 45ಕ್ಕೂ ಅಧಿಕ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಅಲ್ಲದೇ 50ಕ್ಕೂ ಹೆಚ್ಚು ರೈಲುಗಳು ನಿಧಾನಗತಿಯಲ್ಲಿ ಸಂಚರಿಸಿವೆ.

ಕೆಲ ದಿನಗಳಿಂದ ದೆಹಲಿಯ ವಾಯುಮಾಲಿನ್ಯದಿಂದ ಗಾಳಿಯ ಗುಣಮಟ್ಟವು ಅತ್ಯಂತ ಕಳಪೆ ಮಟ್ಟದಲ್ಲಿದೆ. ಇಂದು ಬೆಳಿಗ್ಗೆ 9 ಗಂಟೆಗೆ ವಾಯು ಗುಣಮಟ್ಟ ಸೂಚ್ಯಂಕ(AQI) 372 ಇದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ ಅಂಶ ವರದಿ ನೀಡಿದೆ.

ದೆಹಲಿಯಲ್ಲಿ ದಟ್ಟ ಮಂಜು ಆವರಿಸಿದ್ದ ಕಾರಣ ನಿನ್ನೆ(ಜ.4) 19 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿತ್ತು. ಅಲ್ಲದೇ ಸುಮಾರು 400 ವಿಮಾನಗಳ ಹಾರಾಟ ತಡವಾಗಿದೆ. ಹವಾಮಾನದ ಪರಿಣಾಮ 45ಕ್ಕೂ ಅಧಿಕ ವಿಮಾನಗಳ ಹಾರಾಟ ಸ್ಥಗಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

Tags:
error: Content is protected !!