ನವದೆಹಲಿ: ದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ದಟ್ಟ ಮಂಜು ಆವರಿಸಿಕೊಂಡಿದ್ದು, ವಿಮಾನ ಮತ್ತು ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸತತ ಮೂರು ದಿನಗಳಿಂದ ಮಂಜು ಕವಿದ ವಾತಾವರಣವಿದ್ದ ಹಿನ್ನೆಲೆಯಲ್ಲಿ ಇಂದು(ಜನವರಿ.5) ಸುಮಾರು 45ಕ್ಕೂ ಅಧಿಕ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಅಲ್ಲದೇ 50ಕ್ಕೂ ಹೆಚ್ಚು ರೈಲುಗಳು ನಿಧಾನಗತಿಯಲ್ಲಿ ಸಂಚರಿಸಿವೆ.
ಕೆಲ ದಿನಗಳಿಂದ ದೆಹಲಿಯ ವಾಯುಮಾಲಿನ್ಯದಿಂದ ಗಾಳಿಯ ಗುಣಮಟ್ಟವು ಅತ್ಯಂತ ಕಳಪೆ ಮಟ್ಟದಲ್ಲಿದೆ. ಇಂದು ಬೆಳಿಗ್ಗೆ 9 ಗಂಟೆಗೆ ವಾಯು ಗುಣಮಟ್ಟ ಸೂಚ್ಯಂಕ(AQI) 372 ಇದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ ಅಂಶ ವರದಿ ನೀಡಿದೆ.
ದೆಹಲಿಯಲ್ಲಿ ದಟ್ಟ ಮಂಜು ಆವರಿಸಿದ್ದ ಕಾರಣ ನಿನ್ನೆ(ಜ.4) 19 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿತ್ತು. ಅಲ್ಲದೇ ಸುಮಾರು 400 ವಿಮಾನಗಳ ಹಾರಾಟ ತಡವಾಗಿದೆ. ಹವಾಮಾನದ ಪರಿಣಾಮ 45ಕ್ಕೂ ಅಧಿಕ ವಿಮಾನಗಳ ಹಾರಾಟ ಸ್ಥಗಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಎಚ್‌ಎಂಪಿವಿ ವೈರಸ್‌ನ ಎರಡು ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿದೆ…
ನವದೆಹಲಿ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ…
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂ…
ಚಾಮರಾಜನಗರ : ತಮಿಳುನಾಡು ಕಡೆಗೆ ಕರಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಚಕ್ರಕ್ಕೆ ಯುವಕ ಸಿಲುಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಪುಣಜನೂರು…
ಕುಶಾಲನಗರ: ಮಸೀದಿಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ನಗರದ ಸುಣ್ಣದ ಬೀದಿಯ ನಿವಾಸಿಯಾದ…
ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ವಸ್ತ್ರಸಂಹಿತೆ ವಿವಾದಕ್ಕೆ ಸಂಬಂಧಪಟ್ಟಂತೆ ಜ.7ರವರೆಗೆ ಇದ್ದ ನಿಷೇಧಾಜ್ಞೆಯನ್ನು ಜ.14ರವರೆಗೆ ಮುಂದುವರಿಸಲಾಗಿದೆ.…