ದೇಶ- ವಿದೇಶ

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌ ನಲುಗಿ ಹೋಗಿದೆ.

ಆದರೂ ಕಂಗೆಡದ ಇರಾನ್‌ ದೇಶ ಇಸ್ರೇಲ್‌ ಹಾಗೂ ಅಮೇರಿಕಾದ ಹಲವು ಪ್ರದೇಶಗಳ ಮೇಲೆ ಪ್ರತಿಯಾಗಿ ದಾಳಿ ನಡೆಸುತ್ತಿದ್ದು, ನಾವು ಯಾರಿಗೂ ಬಗ್ಗಲ್ಲ ಎಂಬ ಸಂದೇಶ ರವಾನೆ ಮಾಡುತ್ತಿದೆ.

ಈ ಮಧ್ಯೆ ಇರಾನ್‌ ಹಾರ್ಮುಜ್‌ ಜಲಸಂಧಿಯನ್ನು ಬಂದ್‌ ಮಾಡಿದ್ದು, ತೈಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಜೊತೆಗೆ ಹಾರ್ಮುಜ್ ಜಲಸಂಧಿಯ ಸಮುದ್ರದಡಿ ಜಗತ್ತಿನ ಬಹುತೇಕ ಇಂಟರ್ನೆಟ್ ಸಂಚಾರವನ್ನು ಸಾಗಿಸುವ ದೊಡ್ಡ ಪ್ರಮಾಣದ ಸಬ್‌ಮರಿನ್ ಫೈಬರ್-ಆಪ್ಟಿಕ್ ಕೇಬಲ್‌ಗಳ ಜಾಲವಿದೆ. ಈ ಕೇಬಲ್‌ಗಳು ಏಷ್ಯಾ, ಯುರೋಪ್ ಮತ್ತು ಪಶ್ಚಿಮ ಏಷ್ಯಾವನ್ನು ಸಂಪರ್ಕಿಸುತ್ತವೆ ಮತ್ತು ಹಣಕಾಸು ವ್ಯವಹಾರಗಳು, ವಿಡಿಯೋ ಕರೆಗಳು ಹಾಗೂ ಕ್ಲೌಡ್ ಕಂಪ್ಯೂಟಿಂಗ್ ಸೇರಿದಂತೆ ಅನೇಕ ಡಿಜಿಟಲ್ ಸೇವೆಗಳನ್ನು ಸಾಗಿಸುತ್ತವೆ.‌

ಭಾರತದ ಅಂತರರಾಷ್ಟ್ರೀಯ ಡೇಟಾ ಸಂಚಾರದ ದೊಡ್ಡ ಭಾಗ ಈ ಮಾರ್ಗದ ಸಮೀಪದಿಂದಲೇ ಸಾಗುತ್ತದೆ. ಈ ಪ್ರದೇಶದಲ್ಲಿ ಉದ್ವಿಗ್ನತೆ ಅಥವಾ ಸೈನಿಕ ಚಟುವಟಿಕೆಗಳಿಂದ ಅಡಚಣೆ ಉಂಟಾದರೆ ಹಲವಾರು ಕೇಬಲ್ ವ್ಯವಸ್ಥೆಗಳು ಹಾನಿಗೊಳಗಾಗುವ ಅಥವಾ ಅವುಗಳ ದುರಸ್ತಿ ವಿಳಂಬವಾಗುವ ಸಾಧ್ಯತೆ ಎದ್ದು ಕಾಣುತ್ತಿದೆ. ಇಂಟರ್ನೆಟ್ ಸಂಪೂರ್ಣವಾಗಿ ಸ್ಥಗಿತಗೊಳ್ಳುವುದಿಲ್ಲ. ಆದರೆ ಸಂಚಾರ ದಟ್ಟಣೆ ಹೆಚ್ಚಾಗಿ ಅಂತರರಾಷ್ಟ್ರೀಯ ಸೇವೆಗಳ ವೇಗ ಕಡಿಮೆಯಾಗಬಹುದು.

ಜಾಗತಿಕ ಡಿಜಿಟಲ್ ಆರ್ಥಿಕತೆ ವೇಗವಾಗಿ ವಿಸ್ತರಿಸುತ್ತಿರುವ ಈ ಕಾಲದಲ್ಲಿ, ಸಮುದ್ರದಡಿ ಇರುವ ಈ ಡೇಟಾ ಮಾರ್ಗಗಳನ್ನು ರಕ್ಷಿಸುವುದು ಎನರ್ಜಿ ಸರಬರಾಜು ಮಾರ್ಗಗಳನ್ನು ರಕ್ಷಿಸುವಷ್ಟು ಮಹತ್ವ ಪಡೆದಿದೆ.

ಒಂದು ವೇಳೆ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರಿದರೆ ಇದರ ಪರಿಣಾಮವನ್ನು ಇತರ ದೇಶಗಳು ಅನುಭವಿಸಬೇಕಾಗುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

6 mins ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

15 mins ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

27 mins ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

1 hour ago

ಪ್ರವಾಸಿಗರ ಆಕರ್ಷಣೆಯ ಭದ್ರಾದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

2 hours ago

ಬಿಸಿಲ ಝಳದ ನಡುವೆಯೇ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…

2 hours ago