ದೇಶ- ವಿದೇಶ

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಕಚ್ಚಾ ತೈಲದ ಬೆಲೆ ಏರಿಕೆ ಸಾಧ್ಯತೆ

ರಿಯಾದ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು, ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದನಾ ರಾಷ್ಟ್ರವಾದ ಸೌದಿ ಅರೇಬಿಯಾದ ತೈಲ ಸಂಸ್ಕರಣಾ ಕೇಂದ್ರಗಳನ್ನೇ ಗುರಿಯಾಗಿಸಿಕೊಂಡು ಇರಾನ್ ಭೀಕರ ಡ್ರೋನ್ ದಾಳಿ ನಡೆಸಿದೆ.

ದಿನಕ್ಕೆ ಸುಮಾರು 730,000 ಬ್ಯಾರೆಲ್ ತೈಲವನ್ನು ಸಂಸ್ಕರಿಸಬಲ್ಲ ಸಂಸ್ಕರಣಾಗಾರವು ಮತ್ತೊಂದು ಇರಾನಿನ ದಾಳಿಯಲ್ಲಿ ಹಾನಿಗೊಳಗಾಗಿದೆ. ಇದು ಪರ್ಷಿಯನ್ ಕೊಲ್ಲಿಯ ಸಣ್ಣ, ತೈಲ-ಸಮೃದ್ಧ ರಾಷ್ಟ್ರವಾದ ಕುವೈತ್‍ನಲ್ಲಿರುವ ಮೂರು ತೈಲ ಸಂಸ್ಕರಣಾಗಾರಗಳಲ್ಲಿ ಒಂದಾಗಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರುಪೇರಾಗುವ ಸಾಧ್ಯತೆ ಇದೆ.

ಇರಾನ್ ಈಗಾಗಲೇ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ, ಸೌದಿ ಅರೇಬಿಯಾವು ತನ್ನ ತೈಲ ರಫ್ತಿಗಾಗಿ ಯಾನ್ಬು ಮತ್ತು ಫುಜೈರಾ ಬಂದರುಗಳನ್ನೇ ಹೆಚ್ಚಾಗಿ ಅವಲಂಬಿಸಿತ್ತು. ಆದರೆ, ಇರಾನ್ ಈಗ ಈ ಪರ್ಯಾಯ ಮಾರ್ಗಗಳನ್ನೂ ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ನಿರಂತರ ದಾಳಿಯ ಪರಿಣಾಮವಾಗಿ ಫುಜೈರಾ ಘಟಕದಲ್ಲಿ ಈಗಾಗಲೇ ತೈಲ ಉತ್ಪಾದನೆ ಮತ್ತು ಸಂಸ್ಕರಣಾ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ದಾಳಿಗೂ ಮುನ್ನವೇ ಇರಾನ್ ಕಠಿಣ ಎಚ್ಚರಿಕೆ ನೀಡಿತ್ತು. ಸೌದಿ ಅರೇಬಿಯಾ, ಕತಾರ್ ಮತ್ತು ಯುಎಇ ವ್ಯಾಪ್ತಿಯಲ್ಲಿರುವ ತೈಲ ಮತ್ತು ಗ್ಯಾಸ್ ಘಟಕಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಕೂಡಲೇ ಜಾಗ ಖಾಲಿ ಮಾಡಬೇಕು ಎಂದು ಇರಾನ್ ಸೂಚಿಸಿತ್ತು. ಇದರ ಬೆನ್ನಲ್ಲೇ ಈಗ ಭೀಕರ ದಾಳಿ ನಡೆದಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

2 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

6 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago