ಹೊಸದಿಲ್ಲಿ : ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ವಿಶ್ವ ಹಿಂದು ಪರಿಷತ್ (ವಿಎಚ್‌ಪಿ) ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ವಿವರಣೆ ನೀಡಲು ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಕೊಲಿಜಿಯಂ ಮುಂದೆ ಹಾಜರಾಗುವ ಸಾಧ್ಯತೆಯಿದೆ.
ವಿಎಚ್‌ಪಿ ಕಾರ್ಯಕ್ರಮದಲ್ಲಿ ಶೇಖರ ಅವರು ನೀಡಿದ್ದ ಸುದ್ದಿಗಳನ್ನು ಗಮನಿಸಿದ್ದ ಸುಪ್ರೀಂ ಕೋರ್ಟ್, ವಿವರಣೆ ನೀಡುವಂತೆ ಇತ್ತೀಚೆಗೆ ಸೂಚಿಸಿತ್ತು.
ನ್ಯಾಯಮೂರ್ತಿಗಳಿಂದ ಯಾವುದೇ ವಿವಾದಾತ್ಮಕ ಹೇಳಿಕೆಗಳು ಬಂದ ವೇಳೆ ಆ ಕುರಿತು ಕೊಲಿಜಿಯಂ ವಿವರಣೆ ಕೇಳುತ್ತದೆ. ಮತ್ತೆ ಹೇಳಿಕೆ ಕುರಿತು ವಿವರಣೆ ನೀಡಲು ಅವಕಾಶ ನೀಡುತ್ತದೆ.
ಆ ನಿಟ್ಟಿನಲ್ಲಿ ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ಸಹ ಕೊಲಿಜಿಯಂ ಮುಂದೆ ಹಾಜರಾಗಿ ವಿವರಣೆ ನೀಡುವ ಸಾಧ್ಯತೆಗಳಿವೆ ಎಂದು ಸುಪ್ರೀಂ ಕೋರ್ಟ್‌ನ ಮೂಲಗಳು ತಿಳಿಸಿವೆ.
ಡಿ.8 ನಡೆದ ವಿಎಚ್‌ಪಿ ಕಾನೂನು ವಿಭಾಗದ ಪ್ರಾಂತೀಯ ಸಮಾರಂಭದಲ್ಲಿ ಏಕರೂಪ ನಾಗರೀಕ ಸಂಹಿತೆ ಅಗತ್ಯತೆ, ಧರ್ಮನಿರಪೇಕ್ಷತೆಯ ಬಗ್ಗೆ ಪ್ರತಿಪಾದಿಸಿದ್ದರು.