ದೇಶ- ವಿದೇಶ

ಮತದಾರರ ಹೆಸರು ಡಿಲೀಟ್‌ ವಿವಾದ: ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ನೋಟಿಸ್‌

ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿವಾದ ಇದೀಗ ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಹಂತ ತಲುಪಿದೆ.

ರಾಹುಲ್‌ ಗಾಂಧಿ ಹಾಗೂ ‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ನಾಯಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಭಾರತೀಯ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರಿಗೆ ನೋಟಿಸ್‌ ಜಾರಿ ಮಾಡಿ, ಪ್ರತಿಕ್ರಿಯೆ ಕೋರಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ, ಅಂದರೆ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಹಾಗೂ ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಚುನಾವಣಾ ಆಯೋಗದ ಕಾರ್ಯವೈಖರಿ ಮತ್ತು ಪಾರದರ್ಶಕತೆಯನ್ನೂ ಪ್ರಶ್ನಿಸಿದ್ದಾರೆ.

ಈ ಅರ್ಜಿಗಳನ್ನು ಎಸ್‌ಐಆರ್‌ ಕುರಿತು ಈಗಾಗಲೇ ವಿಚಾರಣೆಯಲ್ಲಿರುವ ಇತರ ಅರ್ಜಿಗಳೊಂದಿಗೆ ಸೇರಿಸಲಾಗಿದೆ.

ಸದ್ಯ ನ್ಯಾಯಾಲಯ ಪ್ರತಿಕ್ರಿಯೆ ಕೋರಿದ್ದು, ಆರೋಪಗಳ ಕುರಿತು ಅಂತಿಮ ತೀರ್ಪು ನೀಡಿಲ್ಲ. ಚುನಾವಣಾ ಆಯೋಗ ಸಲ್ಲಿಸಲಿರುವ ಉತ್ತರ ಹಾಗೂ ಮುಂದಿನ ವಿಚಾರಣೆಯತ್ತ ಈಗ ಎಲ್ಲರ ಗಮನ ನೆಟ್ಟಿದೆ.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ ದಸರಾ ಜಂಬೂಸವಾರಿಗೆ ನಟ ರವಿಚಂದ್ರನ್‌ ಚಾಲನೆ

ಮಂಡ್ಯ: ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ ದೊರೆತಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಪೂರ್ವಕ ಪುಷ್ಪಾರ್ಚನೆ…

9 hours ago

ಅಭಿಮನ್ಯು ಆನೆ ಮಾವುತನ ಪತ್ನಿ ಸಾವು

ಮೈಸೂರು: ದಸರಾ ಗಜಪಡೆಯ ಆನೆ ಅಭಿಮನ್ಯುವಿನ ಮಾವುತ ವಸಂತ ಅವರ ಪತ್ನಿ ಅಂಬಿಕಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 35 ವರ್ಷ…

10 hours ago

ಹೆಣ ಇದ್ದ ಸ್ಕಾರ್ಪಿಯೋ ಓಡಿಸಲು ಯಾರೂ ಸಿದ್ಧರಿಲ್ಲ

ಶೆಡ್‌ನಿಂದ ಹೆಣ ಹಾಕಿಕೊಂಡು ಬಂದ ದೀಪಕ್, ಗೇಟ್ ತನಕ ಬಂದು ಮುಂದಕ್ಕೆ ಹೋಗಲು ಆಗಲ್ಲ ಎಂದು ನಿರಾಕರಣೆ ಹೆಣ ಬಿಸಾಡುವ…

12 hours ago

ರೇಣುಕಾಸ್ವಾಮಿಯ ಹೆಣ ಬಿಸಾಡಲು ಜಾಗ ಹುಡುಕಾಟ

ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ Sattva Apartment ಹಿಂದಿನ ಜನ…

12 hours ago

ನೋಟಿನ ಕಂತೆಗಳನ್ನು ತಂದಿಟ್ಟ ದರ್ಶನ್

ಸರೆಂಡರ್ ಆದವರಿಗೆ ಕೊಡಲು; ಖರ್ಚುವೆಚ್ಚಕ್ಕೆ ಪ್ರದೋಷ್, ವಿನಯ್, ನಾಗರಾಜು ಕೈಗೆ ಕೇಳಿದಷ್ಟು ಹಣ ಕೊಟ್ಟರು ಸಹಾಯ ಮಾಡಿ, ಇಲ್ಲದಿದ್ದರೆ ನೇಣು…

12 hours ago

ಗುಂಪಿನಲ್ಲಿ ಒಬ್ಬರನ್ನು ಸರೆಂಡರ್ ಮಾಡಿಸಲು ಪ್ಲಾನಿಂಗ್

ಹೊಡೆದು ಬಡಿದವರು ಸರೆಂಡರ್ ಆಗಲಿ ಎಂದು ಚಿತ್ರದುರ್ಗದ ಹುಡುಗರ ವಾದ ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಘವೇಂದ್ರ ಮನವೊಲಿಸಲು…

13 hours ago